ಬೆಳಗಾವಿ 23: ಕಬ್ಬಿಗೆ ಸೂಕ್ತ ದರ ನಿಗದಿ , ಬಾಕಿ ಹಣ ಕೊಡಿಸುವಂತೆ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಶುಕ್ರವಾರ ಹಿಂಪಡೆಯಲಾಗಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 15 ದಿನಗಳೊಳಗೆ ಬಾಕಿ ಹಣ ನೀಡುವಂತೆ ಸೂಚಿಸಿದ ಬೆನ್ನಲ್ಲೇ ಸಚಿವ ಡಿ.ಕೆ.ಶಿವಕುಮಾರ್ ಅವರು ಧರಣಿ ನಿರತ ಸ್ಥಳಕ್ಕೆ ತೆರಳಿ ರೈತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಸಚಿವ ಡಿಕೆಶಿ ಅವರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ರೈತರ ಮನವೊಲಿಸಿದರು.
2 ದಿನಗಳಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಸಿದ್ದನಗೌಡ ಮೊದಗಿ ಮತ್ತು ಜಯಶ್ರಿ ಅವರಿಗೆ ಮೊದಲು ಎಳನೀರನ್ನು ಕುಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆಶಿ ರೈತರು ನ್ಯಾಯೋಚಿತ ಹೋರಾಟ ನಡೆಸಿದ್ದಾರೆ. ಸಕರ್ಾರದ ಗಮನ ಸೆಳೆದಿದ್ದಾರೆ. ಅವರ ಬೇಡಿಕೆಗಳನ್ನು ಈಡೇರಿಸುತ್ತೇವೆ.ರೈತರು ನಮ್ಮವರು ,ನಾವು ರೈತರ ಪರ ಇರುವವರು ಎಂದರು.
ಹೋರಾಟ ನಿರತ ರೈತರು 15 ದಿನಗಳ ಗಡುವನ್ನು ಸಕರ್ಾರಕ್ಕೆ ನೀಡಿದ್ದಾರೆ.ಮಾತ್ರವಲ್ಲದೆ ಬೇಡಿಕೆ ಈಡೇರದೆ ಹೊದಲ್ಲಿ ಮತ್ತೆ ಹೋರಾಟ ಆರಂಭಿಸುವ ಎಚ್ಚರಿಕೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ರೈತರು ಧರಣಿ ನಡೆಸುತ್ತಿದ್ದರು. ರಮೇಶ್ ಜಾರಕಿಹೊಳಿ ಸೇರಿ ಪ್ರಮುಖ ನಾಯಕರ ವಿರುದ್ಧ ದೂರು ರೈತರು ಸಚಿವ ಡಿ.ಕೆ.ಶಿವಕುಮಾರ್ ಅವರ ಬಳಿ ಸಚಿವ ರಮೇಶ್ ಜಾರಕಿಹೊಳಿ ಅವರ ಕಾಖರ್ಾನೆ ಬಾಕಿ ಇರಿಸಿಕೊಂಡಿರುವ ಹಣದ ಕುರಿತಾಗಿ ದಾಖಲೆಗಳನ್ನು ತೋರಿಸಿದ್ದಾರೆ. ಮಾತ್ರವಲ್ಲದೆ ಬಿಜೆಪಿ ನಾಯಕರು ಸೇರಿ ಪ್ರಮುಖ ಕಾಖರ್ಾನೆ ಮಾಲೀಕರು ಬಾಕಿ ಇರಿಸಿಕೊಂಡಿರುವ ಬಗ್ಗೆ ದಾಖಲೆಗಳನ್ನು ತೋರಿಸಿದ್ದಾರೆ ಎಂದು ವರದಿಯಾಗಿದೆ.
ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಪೊಲೀಸರ ಬಿಗಿ ಭದ್ರತೆಯಲ್ಲಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನ ಹಳ್ಳಿ ಕಚೇರಿಗೆ ಆಗಮಿಸಿದರು. ಈ ವೇಳೆ ರೈತರು ಧಿಕ್ಕಾರಗಳನ್ನು ಕೂಗಿದರು.
ರೈತರಿಗೆ ಕಳೆದ ವರ್ಷದ ಕಬ್ಬಿನ ಬಾಕಿ ನೀಡಬೇಕಾದ ವಿಚಾರದಲ್ಲಿ ಸಕ್ಕರೆ ಕಾಖರ್ಾನೆ ಮಾಲೀಕರು ರೈತರೊಂದಿಗೆ ಮಾಡಿಕೊಂಡ ಮೌಖೀಕ ಒಪ್ಪಂದದಂತೆ ಮುಂದಿನ ಹದಿನೈದು ದಿನಗಳೊಳಗೆ ಬಾಕಿ ಹಣ ಕೊಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.