ರೈತರ ನಾನಾ ಬೇಡಿಕೆಗಳ ಆಗ್ರಹಿಸಿ ಪ್ರತಿಭಟನೆ
Farmers protest demanding fulfillment of various demands
ಹೂವಿನಹಡಗಲಿ 18: ರೈತರ ಸಾಲ ಮನ್ನಾ, ಬೆಳೆ ಪರಿಹಾರ, ಭೂರಹಿತ ಬಡವರಿಗೆ ಭೂಮಿ ಹಕ್ಕುಪತ್ರ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ತಾಲೂಕು ಘಟಕದ ವತಿಯಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟಿಸಿ ತಹಶೀಲ್ದಾರ್ ಸಂತೋಷ್ ಕುಮಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಮಂಡಳಿ ಸದಸ್ಯ ಹಲಗಿ ಸುರೇಶ್ ಮಾತನಾಡಿ, ಜಿಲ್ಲೆಗಲ್ಲಿ ಕೈಗಾರಿಕೆ, ನೀರಾವರಿ, ಸಾರಿಗೆ ಸೇರಿದಂತೆ ವಿವಿಧ ಯೋಜನೆಗಳಿಗೆ ಸರ್ಕಾರ ರೈತರ ಭೂಮಿಯನ್ನು ಭೂಸ್ವಾಧೀನ ಮಾಡಿಕೊಂಡಿದೆ. ಆದರೆಯೋಜನೆ ಆರಂಭಿಸಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ ಭೂಸ್ವಾಧೀನ ಕಾಯ್ದೆ ದುರ್ಬಳಕೆಯಾಗಿದೆ. ಯೋಜನೆ ಆರಂಬಿಸಬೇಕು. ಇಲ್ಲವೇ ರೈತರಿಗೆ ಭೂಮಿಯನ್ನು ವಾಪಸ್ ಕೊಡಬೇಕು. ಅತಿವೃಷ್ಟಿಯಿಂದ ಅನಾವೃಷ್ಟಿಯಿಂದಬೆಳೆಗಳು ಹಾನಿಯಾಗಿದ್ದು, ರೈತರಿಗೆ ಬೆಳೆ ಪರಿಹಾರ ನೀಡಬೇಕು. ಜೊತೆಗೆ ಸಹಕಾರ ಸಂಘದಲ್ಲಿ, ಬ್ಯಾಂಕುಗಳಲ್ಲಿ, ಮೈಕ್ರೋ ಫೈನಾನ್ಸ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು. ಸಿಪಿಐ ಕಾರ್ಯದರ್ಶಿ ಬಾವಾಜಿ ಜಂಗ್ಲಿ ಸಾಬ್ ಮಾತನಾಡಿ ಕೇಂದ್ರ ಸರ್ಕಾರ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು ರಾಜ್ಯ ಸರ್ಕಾರ ಕೂಡಲೇ ಬೆಂಬಲ ಬೆಲೆ ಖರೀದಿ ಕೇಂದ್ರ ತೆಗೆಯಬೇಕು ಎಂದು ಒತ್ತಾಯಿಸಿದರು.
ತಾಲೂಕು ಉಪಾಧ್ಯಕ್ಷ ನಾಗರಾಜ್ ಕೋಟ್ಯಾಳ್, ಜಿಲ್ಲಾ ಸಮಿತಿ ಸದಸ್ಯ ಬಸವರಾಜ್ ಸಂಶಿ, ಅಖಂಡ ಕರ್ನಾಟಕ ರೈತ ಸಂಘದ ಕಾರ್ಯದರ್ಶಿ ಶಿವರಾಜ್ ಸೇರಿದಂತೆ ರೈತರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 