ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ
Farmers protest demanding release of water into the canal.
ಇಂಡಿ ೨೪: ರೈತರ ತಾಳ್ಮೆಯನ್ನು ಪರೀಕ್ಷಿಸಬಾರದು. ಒಮ್ಮೆ ತಾಳ್ಮೆ ಪರೀಕ್ಷಿಸಿದರೆ ಮುಂದೆ ಸುಮ್ಮನಿರುವುದಿಲ್ಲ ಎಂದು ಮಾಜಿ ಶಾಸಕ ರವಿಕಾಂತ ಪಾಟೀಲ ಎಚ್ಚರಿಸಿದರು.
ಇಂಡಿ ನಗರದಲ್ಲಿ ರೈತ ಸಂಘದವರು ಹಮ್ಮಿಕೊಂಡಿದ್ದ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆಗೆ ಕೊನೆಯವರೆಗೂ ನೀರು ಹರಿಸುವಂತೆ ಆಗ್ರಹಿಸಿ ನಡೆಸಿದ ಹೋರಾಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಒಂದು ವಾರದೊಳಗೆ ಟೇಲ್ ಎಂಡ್ವರೆಗೆ ನೀರು ಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಎಲ್ಲ ರೈತರೊಂದಿಗೆ ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಬಿ.ಡಿ. ಪಾಟೀಲ ಮಾತನಾಡಿ, ಈ ಭಾಗದ ರೈತರ ನ್ಯಾಯಯುತ ಒಣಭೂಮಿ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಅತ್ಯಂತ ನಿರ್ಣಾಯಕವಾಗಿದ್ದು, ರೈತರ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಮುಖಂಡ ಶೀಲವಂತ ಉಮರಾಣಿ ಮಾತನಾಡಿ, ಮಳೆಯ ಕೊರತೆಯಿಂದ ಕೃಷಿ ಭೂಮಿಯಲ್ಲಿ ಬೆಳೆಗಳು ಒಣಗುತ್ತಿವೆ. ರೈತರು ತೀವ್ರ ಸಂಕಷ್ಟದಲ್ಲಿರುವುದರಿAದ ಸಂಬAಧಿಸಿದ ಕಾಲುವೆಗೆ ತಕ್ಷಣ ನೀರು ಹರಿಸಿ ಬೆಳೆ ಹಾಗೂ ರೈತರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಇಂಡಿ ಕೃಷ್ಣಾ ಮೇಲ್ದಂಡೆ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಅತನೂರ ಅವರು ರೈತರೊಂದಿಗೆ ಮಾತುಕತೆ ನಡೆಸಲು ಮುಂದಾದಾಗ, ರೈತರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಬಾಳು ಮುಳಜಿ ಅವರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಸ್ಥಳದಲ್ಲಿಲ್ಲದಿರುವುದು ರೈತರ ಸಮಸ್ಯೆಯ ಬಗ್ಗೆ ಅಧಿಕಾರಿಗಳ ನಿರ್ಲಕ್ಷö್ಯವನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಮೇಲಾಧಿಕಾರಿಗಳು ದೂರವಾಣಿ ಮೂಲಕ ಮಾತನಾಡಿ, ಒಂದು ವಾರದೊಳಗೆ ಕಾಲುವೆಗೆ ನೀರು ಹರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.
ಪ್ರತಿಭಟನೆಯಲ್ಲಿ ದೇವೇಂದ್ರಪ್ಪ ಕುಂಬಾರ, ವಿರಾಜ ಪಾಟೀಲ, ಅನೀಲಗೌಡ ಬಿರಾದಾರ, ಕೆಆರ್ಎಸ್ ಪಕ್ಷದ ನಾಯಕರು, ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ರಿಯಾಜ್, ರೈತ ಮುಖಂಡ ಅಣ್ಣಪ್ಪ ಅಗಸರ, ಜೇಟ್ಟಪ್ಪ ಮರಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 