ಕೆರೆಗಳಿಗೆ ನೀರು ಹರಿಸುವಂತೆ ರೈತರ ಪ್ರತಿಭಟನೆ
Farmers protest demanding water release into lakes
ರಾಣೆಬೆನ್ನೂರು 7: ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ರಾಣೆಬೆನ್ನೂರಿನ ಯುಟಿಪಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ಮಳೆ ಕೊರತೆ, ಬೆಳೆ ಹಾನಿಯಿಂದ ರೈತರು ಸಂಕಷ್ಟದಲ್ಲಿದ್ದು, ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ಅರುಣಕುಮಾರ ಪೂಜಾರ್ ಮಾತನಾಡಿ, ರಾಣಿಬೆನ್ನೂರು ಹಿಚಳಗೆರಿ ಕೆರೆ ಯೋಜನೆ ಘೋಷಣೆಯಾದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಟೀಕಿಸಿದರು. ಬಿಜೆಪಿ ಮುಖಂಡ ಸಿದ್ದಪ್ಪ ಚಿಕ್ಕಬಿದರಿ ಸೇರಿದಂತೆ ಹಲವು ಮುಖಂಡರು ಸರ್ಕಾರ ಯೋಜನೆಗಳನ್ನು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆ ಬಳಿಕ ಸ್ಥಳಕ್ಕೆ ಬಂದ ಯುಟಿಪಿ ಅಧಿಕಾರಿಗಳು 15 ದಿನಗಳೊಳಗೆ ಕೆರೆಗಳಿಗೆ ನೀರು ಹರಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಕಾರ್ಯಕ್ರಮದಲ್ಲಿ ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನೂರಾರು ರೈತರು ಭಾಗವಹಿಸಿದ್ದರು.
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ 