ಆಲಮಟ್ಟಿ ಜಲಾಶಯ ನೀರಿನ ಮಟ್ಟ ಅಧಿಸೂಚನೆಗೆ ಆಗ್ರಹಿಸಿ ಬಸವನ ಬಾಗೇವಾಡಿಯಲ್ಲಿ ರೈತರ ಪ್ರತಿಭಟನೆ
Farmers protest in Basavana Bagevadi demanding notification of the Almatti reservoir water level
ಬಸವನ ಬಾಗೇವಾಡಿ, ಜು. 2: 2ನೇ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ ಅಂತಿಮ ತೀರ್ಿನಂತೆ ಆಲಮಟ್ಟಿ ಜಲಾಶಯದಲ್ಲಿ 524.256 ಮೀಟರ್ ನೀರಿನ ಮಟ್ಟ ಸಂಗ್ರಹಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ತಕ್ಷಣ ಪ್ರಕಟಿಸಬೇಕು. ಜೊತೆಗೆ ಮುಳುಗಡೆಯಾಗಲಿರುವ 22 ಗ್ರಾಮಗಳ ರೈತರಿಗೆ ನ್ಯಾಯಯುತ ಪುನರ್ವಸತಿ, ಸಮರ್ಕ ಪರಿಹಾರ ಹಾಗೂ ಮೂಲಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಗುರುವಾರ ಬಸವನ ಬಾಗೇವಾಡಿಯಲ್ಲಿ ವಿವಿಧ ರೈತ, ಪ್ರಗತಿಪರ, ಕನ್ನಡಪರ ಹಾಗೂ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಮತ್ತು ಮೆರವಣಿಗೆ ನಡೆಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭವಾದ ಮೆರವಣಿಗೆ ಬಸ್ ನಿಲ್ದಾಣ ಮಾರ್ಗವಾಗಿ ತಹಶೀಲ್ದಾರ್ ಕಚೇರಿವರೆಗೆ ಸಾಗಿತು. ಪ್ರತಿಭಟನಾಕಾರರು ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ತಹಶೀಲ್ದಾರ್ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಏಘಆಖಿ-ಋ ಅಂತಿಮ ತೀಪು ಪ್ರಕಟವಾಗಿ ಹಲವು ವರ್ಷಗಳಾದರೂ ಅದರ ಅನುಷ್ಠಾನಕ್ಕೆ ಅಗತ್ಯವಾದ ಅಧಿಸೂಚನೆ ಇನ್ನೂ ಹೊರಬಂದಿಲ್ಲ. ಇದರಿಂದ ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 22 ಗ್ರಾಮಗಳ ಸಾವಿರಾರು ಕುಟುಂಬಗಳು ಅನಿಶ್ಚಿತತೆಯಲ್ಲಿದ್ದು, ಅವರಿಗೆ ಸೂಕ್ತ ಪುನರ್ವಸತಿ, ಭೂಮಿಗೆ ಭೂಮಿ, ನ್ಯಾಯಸಮ್ಮತ ಪರಿಹಾರ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಹೊಣೆ ಸರ್ಕಾರಗಳ ಮೇಲಿದೆ ಎಂದು ಹೇಳಿದರು.
ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿವೆ ಎಂದು ಟೀಕಿಸಿದರು. ಉತ್ತರ ಕರ್ನಾಟಕದ ರೈತರಿಗೆ ನ್ಯಾಯಯುತವಾಗಿ ನೀರಿನ ಹಕ್ಕು ದೊರೆಯುವಂತೆ 524.256 ಮೀಟರ್ ನೀರಿನ ಮಟ್ಟಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನು ತಕ್ಷಣ ಪ್ರಕಟಿಸಬೇಕು. ಇಲ್ಲವಾದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿ. ಭಗವಾನ್ ರೆಡ್ಡಿ, ಅನಿಲ್ ಹೊಸಮನಿ, ಅಕ್ರಮ ಮಾಶಾಳ್ಕರ್, ಸುರೇಶ್ ಜಿ.ಬಿ., ಅಪ್ಪಾಸಾಹೇಬ ಯರನಾಳ, ಲಲಿತಾ ಬಿಜ್ಜರಗಿ, ನೀಲಾಂಬಿಕಾ ಬಿರಾದಾರ, ವಿಠ್ಠಲ್ ಬಿರಾದಾರ, ಗಿರಿಮಲ್ಲಪ್ಪ ದೊಡ್ಡಮನಿ, ಹಣಮಂತರಾಯ ಗುಣಕಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 