ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಅಭಾವ ಆಗದಿರಲಿ : ಮ್ಯಾಗೇರಿ
Farmers should not face shortage of seeds and fertilizers: Mageri
ಲೋಕದರ್ಶನ ವರದಿ
ಶಿಗ್ಗಾವಿ 16 : ಮುಂಗಾರು ಹಂಗಾಮು ಸಮೀಪಿಸುತ್ತಿದ್ದು ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಅಭಾವ ಆಗದಂತೆ ಕಳ್ಳ ಸಂತೆಯಲ್ಲಿ ಮಾರಾಟವಾಗದಂತೆ ಹೆಚ್ಚಿನ ದರ ಪಡೆಯದಂತೆ ಸರಕಾರ ನಿಗದಿಪಡಿಸಿದ ದರದಲ್ಲಿ ರೈತರಿಗೆ ದೊರಕುವಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಮಾಜಿ ತಾಲೂಕ ಬಿಜೆಪಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಒತ್ತಾಯಿಸಿದ್ದಾರೆ.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರೈತರು ಕೇಳುವುದು ರಸಗೊಬ್ಬರ. ಪರಿಶುದ್ಧವಾದ ಬೀಜ.ಬೆಳೆದ ಬೆಳೆಗೆ ಯೋಗ್ಯವಾದ ಬೆಲೆ. ಬೋರ್ವೆಲ್ ಗಳಿಗೆ ಸಮರ್ಕವಾದ ವಿದ್ಯುತ್ ಕೊಟ್ಟರೆ ಸಾಕು ಧನ್ಯವಾದ ಹೇಳುತ್ತಾರೆ.
ಕೃಷಿಯನ್ನು ನಂಬಿದ ರೈತರು ಬಿತ್ತುವ ವೇಳೆಯಲ್ಲಿ ರಸಗೊಬ್ಬರ ಸಿಗುತ್ತದೆಯೋ ಇಲ್ಲವೋ ಎಂದು ಭಯಪಟ್ಟು ರೈತರು ಈಗಾಗಲೇ ಹೆಚ್ಚಿನ ದರಕ್ಕೆ ರಸಗೊಬ್ಬರ ಖರೀದಿಸುತ್ತಿದ್ದಾರೆ ತಕ್ಷಣ ಅಧಿಕಾರಿಗಳು ರಸಗೊಬ್ಬರದ ಕೊರತೆ ಇಲ್ಲ ರೈತರು ಭಯಪಡಬೇಕಾಗಿಲ್ಲ ಎಂದು ಕೃಷಿ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಅವರು ಜಂಟಿಯಾಗಿ ಪತ್ರಿಕಾ ಹೇಳಿಕೆ ನೀಡಬೇಕು ಮತ್ತು ಒಟ್ಟು ಕ್ಷೇತ್ರ ಹಾಗೂ ಎಷ್ಟು ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದೆ ಮತ್ತು ಎಷ್ಟು ದಾಸ್ತಾನು ಅಂದರೆ ಸ್ಟಾಕ್ ಆಗಿದೆ ಎಂಬುದನ್ನು ತಿಳಿಸಬೇಕು ಎಲ್ಲ ಸೊಸೈಟಿಗಳ ಮುಖಾಂತರ ರೈತರಿಗೆ ಸಮರ್ಕ ರಸಗೊಬ್ಬರ ವಿತರಿಸಬೇಕೆಂದು ಎಂದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 