ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಿದ ರೈತರು
Farmers staged a massive protest by blocking the road
ಇಂಡಿ 05: ತಾಲ್ಲೂಕಿನ ಹೃದಯ ಭಾಗದಲ್ಲಿರುವ ಶ್ರೀ ಬಸವೇಶ್ವರ ವೃತ್ತದ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಆಗುವರಿಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 3ನೇ ದಿನಕ್ಕೆ ಕಾಲಿಟ್ಟಿದ್ದು ಇಂದು ರೈತರು ಇಂಡಿ ನಗರದ ಬಸವೇಶ್ವರ ವೃತ್ತದ ಬಳಿ ರಸ್ತೆ ತಡೆದು ಟಾಯರಿಗೆ ಬೆಂಕಿ ಹಚ್ಚಿ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡದ ಸರ್ಕಾರಕ್ಕೆ ದಿಕ್ಕಾರ ದಿಕ್ಕಾರ ಎಂದು ಕೂಗಿ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಶಾಂತೇಶ್ವರ ವಿವಿಧೋದ್ದೇಶಗಳ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಮಂತ ಇಂಡಿ ಅವರು ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ. ರೈತರ ಕಬ್ಬಿಗೆ ಪ್ರತಿ ಟನ್ ಕಬ್ಬಿಗೆ ಮೂರುವರೆ ಸಾವಿರ ರೂಪಾಯಿ ಬೆಲೆ ನಿಗದಿ ಮಾಡಬೇಕು ಎಂದು ಹೇಳಿದರು.ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲ ಮಾತನಾಡಿ ಈ ಬಾರಿ ಸುರಿದ ಭಾರಿ ಮಳೆಯಿಂದ ರೈತರ ಬದುಕು ಮೂರಾಬಟ್ಟೆ ಆಗಿ ಹೋಗಿದೆ. ಕಬ್ಬು ಬೆಳೆಗಾರರಿಗೆ ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ಇವರಿಗೆ ಪರಿಹಾರ ನೀಡಿದೆ. ರೈತರೊಂದಿಗೆ ಚೆಲ್ಲಾಟವಾಡುತ್ತಿದೆ. ಹಾಗೂ ಪ್ರವಾಹ ಭೀತಿಯಿಂದ ಭೀಮಾ ತೀರದಲ್ಲಿ ಸುಮಾರು ಎಕರೆ ಕಬ್ಬು ಬೆಳೆ ಹಾಗೂ ಹತ್ತಿ ಮೆಕ್ಕೆಜೋಳ ತೋಗರಿ ಸೇರಿದಂತೆ ಅನೇಕ ಬೆಳೆಗಳು ಹಾನಿಯಾಗಿವೆ. ಹಾಗೂ ಅನೇಕ ಮನೆಗಳಿಗೆ ನೀರು ನುಗ್ಗಿ ಮನೆ ಕಳೆದುಕೊಂಡ ನೊಂದ ಫಲಾನುಭವಿಗಳಿಗೆ ಇನ್ನೂ ಮನೆ ಪರಿಹಾರ ನೀಡಿಲ್ಲ ಎಂದು ಹೇಳಿದರು,
ಬಿಜೆಪಿ ಮುಖಂಡರಾದ ಶೀಲವಂತ ಉಮರಾಣಿ ಅವರು ಮಾತನಾಡಿ ಸರ್ಕಾರ ಮಾತ್ರ ನವೆಂಬರ್ ಕ್ರಾಂತಿ ಡಿಸೆಂಬರ್ ಕ್ರಾಂತಿ ಹೇಳುತ್ತಾ ಜನರ ನಿದ್ದೆಗೆಡಿಸಿದೆ. ಕೇಂದ್ರ ಸರ್ಕಾರ ನಿಗದಿ ಪಡಿಸಿದ ದರವನ್ನು ರಾಜ್ಯ ಸರ್ಕಾರ ಜಾರಿ ತೋರುತ್ತಿಲ್ಲ, ನಾವು ರೈತ ಪರ ಅಂತ ಹೇಳುವ ಕಾಂಗ್ರೆಸ್ ಪಕ್ಷ ರೈತರ ಜ್ಯೋತಿ ಚೆಲ್ಲಾಟ ಆಡುತ್ತಾ ಕಾಲ ಹರಣ ಮಾಡುತ್ತದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಹಸೀರು ಸೇನ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಎಸ್ ಬಿ ಕೆಂಬೋಗಿ, ಅನೀಲಗೌಡ ಬಿರಾದಾರ, ಭೀಮನಗೌಡ ಬಿರಾದಾರ, ಬಾಳು ಮುಳಜಿ, ಅದೃಷಪ್ಪ ವಾಲಿ, ಶ್ರೀಧರ ಕ್ಷೇತ್ರಿ, ಎಸ್ ಎಸ್ ರೂಗಿಮಠ, ಮಲ್ಲು ಹಾವಿನಾಳ, ಅಶೋಕ ಅಕಲಾದಿ, ರವಿ ಗೌಳಿ, ಮಲ್ಲು ಗುಡ್ಲ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು. ಹಾಗೂ ಕಬ್ಬಿನ ಬೆಲೆ ಹೋರಾಟಕ್ಕೆ ಬೆಂಬಲ ರೈತರು ಹಂತಿ ಪದಗಳು ಹಾಗೂ ಡೊಳ್ಳಿನ ಪದಗಳು ಹಾಡುತ್ತಾ ಕುಣಿಯುತ್ತಿರುವುದು ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 