ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ
Farmers suicide in Maharashtra: Rahul Gandhi lashed out at the central government
ನವದೆಹಲಿ 03: ಕೃಷಿ ಸಮಸ್ಯೆಗಳತ್ತ ಮೋದಿ ಸರ್ಕಾರದ ತೀವ್ರತರವಾದ ಅಸಡ್ಡೆಯಿಂದ ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಹೆಚ್ಚಳವಾಗುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಿಂದಿಯಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ರೈತರ ಧೀರ್ಘ ಕಾಲದ ಬೇಡಿಕೆಗಳನ್ನು ಅದರಲ್ಲೂ ನಿರ್ದಿಷ್ಟವಾಗಿ ಕನಿಷ್ಠ ಬೆಂಬಲ ಬೆಲೆಗೆ ಶಾಸನಬದ್ಧ ಖಾತ್ರಿ ಮತ್ತು ಸಮಗ್ರ ಸಾಲ ಮನ್ನಾ ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
TNIE ವರದಿಯೊಂದನ್ನು ಉಲ್ಲೇಖಿಸಿ, ಮಹಾರಾಷ್ಟ್ರದಲ್ಲಿ 2025 ಜನವರಿಂದ ಮಾರ್ಚ್ ವರೆಗೂ 767 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮ್ಮನೆ ಯೋಚಿಸಿ, ಕೇವಲ ಮೂರು ತಿಂಗಳಲ್ಲಿ ಇಷ್ಟೊಂದು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ. ಈ ಕುಟುಂಬಗಳ ಬದುಕು ಹಾಳಾಗಿದೆ. ಸರ್ಕಾರ ಏನು ಮಾಡುತ್ತಿದೆ? ಮೌನವಾಗಿ ನೋಡುತ್ತಿದ್ದೇಯೆ? ಎಂದು ಪ್ರಶ್ನಿಸಿದ್ದಾರೆ.
ಬಿತ್ತನೆ ಬೀಜ, ರಸಗೊಬ್ಬರ, ಡೀಸೆಲ್ ಗಳ ಬೆಲೆ ಹೆಚ್ಚಳದಿಂದ ರೈತರನ್ನು ಸಾಲದ ಕೂಪಕ್ಕೆ ತಳ್ಳಲಾಗಿದೆ. ಆದಾಗ್ಯೂ ಅರ್ಥಪೂರ್ಣ ಕಾಯ್ದೆ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕನಿಷ್ಠ ಬೆಂಬಲ ಬೆಲೆ ಮತ್ತು ರೈತರ ಸಾಲ ಮನ್ನಾಕ್ಕೆ ಯಾವುದೇ ಖಾತ್ರಿ ಇಲ್ಲ. ಅವೆಲ್ಲವನ್ನೂ ನಿರ್ಲಕ್ಷಿಸಲಾಗುತ್ತಿದೆ. ಸರ್ಕಾರ ದೊಡ್ಡ ಕೈಗಾರಿಕೆಗಳತ್ತ ಉದಾರತೆ ಮೆರೆಯುತ್ತಿದೆ. ಯಾವುದೇ ಹಿಂಜರಿಕೆಯಿಲ್ಲದೆ ಅಂತಹವರ ಸಾವಿರಾರು ಕೋಟಿ ರೂ. ಮನ್ನಾ ಮಾಡಲಾಗುತ್ತಿದೆ. ಅನಿಲ್ ಅಂಬಾನಿ ಎಸ್ ಬಿಐಗೆ ರೂ. 48,000 ಕೋಟಿ ವಂಚನೆ ಮಾಡಿರುವ ಸುದ್ದಿ ನೋಡಿ ಎಂದಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 