ಜೋಳ ಖರೀದಿ ಹಣ ಬಿಡುಗಡೆಗೆ ರೈತರ ಒತ್ತಾಯ
Farmers urge release of funds for maize procurement
ಶಿಗ್ಗಾಂವಿ, ಜು. 31: ಸರ್ಕಾರ ಖರೀದಿಸಿರುವ ಜೋಳದ ಹಣವನ್ನು ರೈತರ ಖಾತೆಗೆ ತಕ್ಷಣ ಜಮಾ ಮಾಡಬೇಕು ಎಂದು ಆಗ್ರಹಿಸಿ ಶಿಗ್ಗಾಂವಿ ಹಾಗೂ ಸವಣೂರು ತಾಲೂಕು ರೈತ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಅವರಿಗೆ ಮನವಿ ಸಲ್ಲಿಸಿದರು.
ಶಿಗ್ಗಾಂವಿ ತಾಲೂಕಿನಲ್ಲಿ ಸುಮಾರು 14 ಸಾವಿರ ಕ್ವಿಂಟಲ್ ಹಾಗೂ ಸವಣೂರು ತಾಲೂಕಿನಲ್ಲಿ ಸುಮಾರು 16 ಸಾವಿರ ಕ್ವಿಂಟಲ್ ಜೋಳವನ್ನು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಖರೀದಿಸಿದೆ. ಆದರೆ ಇದುವರೆಗೆ ರೈತರ ಖಾತೆಗೆ ಹಣ ಜಮಾ ಮಾಡದಿರುವುದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ವರ್ಷ ಮಳೆ ಕೊರತೆಯಿಂದ ರೈತರು ಈಗಾಗಲೇ ಸಂಕಷ್ಟದಲ್ಲಿದ್ದು, ಆಗಸ್ಟ್ 5ರೊಳಗೆ ಬಾಕಿ ಹಣವನ್ನು ಬಿಡುಗಡೆ ಮಾಡದಿದ್ದರೆ ಶಿಗ್ಗಾಂವಿ ಹಾಗೂ ಸವಣೂರು ತಾಲೂಕುಗಳಲ್ಲಿ ಹೋರಾಟ ಮತ್ತು ಬಂದ್ಗೆ ಕರೆ ನೀಡಲಾಗುವುದು ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಸಲಿಂಗಪ್ಪ ನರಗುಂದ, ಮಂಜುನಾಥ ಕಂಕಣವಾಡ, ಆನಂದ ಕೆಳಗಿನಮನಿ, ಈರಣ್ಣ ಸಮಗೊಂಡ, ಶಂಕರಗೌಡ ಪಾಟೀಲ, ಶಿವಾನಂದ ಜಡಿಮಠ, ಚಂದ್ರಶೇಖರಯ್ಯ ಹಿರೇಮಠ, ರಾಮನಗೌಡ ಗಾಳಿಗೌಡ, ರೇವಣಸಿದ್ದಯ್ಯ ಹಿರೇಮಠ, ರಮೇಶ್ ಜೋಳದ, ಪರಸಪ್ಪ ಸಾವಕ್ಕನವರ್, ಶಂಕ್ರ್ಪ ಹೊಂಡದಕಟ್ಟಿ, ಚಂದ್ರು ಹರಿಗೊಂಡ, ಪ್ರಶಾಂತ ಗುಂಡೋಡಿ, ಮಹದೇವಪ್ಪ ಗಂಜಿಗಟ್ಟಿ, ರಮೇಶ್ ಗೋರವರ ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 