ಆರ್.ಅಶೋಕ್ ಮುಂದೆಯೇ ವಿಷ ಸೇವಿಸಿದ ರೈತರು
Farmers who consumed poison in front of R. Ashok
ರಾಮನಗರ 16: ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗೆ ಭೂಸ್ವಾಧೀನ ಮಾಡಲು ಮುಂದಾಗಿರುವ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ವೇಳೆ ವಿರೋಧ ಪಕ್ಷದ ನಾಯಕರ ಸಮ್ಮುಖದಲ್ಲೇ ಕೆಲ ರೈತರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಚಿಕ್ಕಬೈರಮಂಗಲದ ನಾಗೇಶ್ ಕುಮಾರ್, ರಮ್ಯಾ ಆತ್ಮಹತ್ಯೆಗೆ ಯತ್ನಿಸಿದವರು. ರೈತರಿಗೆ ಬೆಂಬಲ ಸೂಚಿಸಿ ಬಿಜೆಪಿ ಮುಖಂಡರು ಮಂಗಳವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಮಾತನಾಡುತ್ತಿದ್ದ ಸಮಯದಲ್ಲಿ ತಮ್ಮ ನೋವನ್ನು ತೋಡಿಕೊಂಡ ಮಹಿಳೆ, ನಮ್ಮ ಭೂಮಿ ಕಸಿದು ಕೊಂಡರೆ ನಮಗೆ ಸಾಯುವುದನ್ನು ಬಿಟ್ಟು ಬೇರೆ ದಾರಿ ಇಲ್ಲ ಎಂದು ತಂದಿದ್ದ ವಿಷವನ್ನು ಸೇವಿಸಿದರು.
ನಾಗೇಶ್ ಕುಮಾರ್ ವಿಷ ಸೇವಿಸಿ ಅಸ್ವಸ್ಥಗೊಂಡರೆ, ರಮ್ಯಾ ವಿಷಸೇವನೆಗೆ ಮುಂದಾಗುತ್ತಿದ್ದಂತೆ ಸುತ್ತಲೂ ಇದ್ದ ಜನತೆ ವಿಷದ ಬಾಟಲಿಯನ್ನು ಕಸಿದು ಕೊಂಡರು. ವಿಷ ಸೇವಿಸಿದ ನಾಗೇಶ್ ಕುಮಾರ್ ಅವರನ್ನು ಬೈರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರೈತರಿಗೆ ಸಾಂತ್ವನ ಹೇಳಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ನಿಮ್ಮೊಂದಿಗೆ ನಾವಿರುತ್ತೇವೆ. ಧೈರ್ಯಗೆಡಬೇಡಿ. ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ದುಡುಕು ನಿರ್ಧಾರ ತಳೆಯಬೇಡಿ. ಸರ್ಕಾರದ ವಿರುದ್ಧ ಹೋರಾಟ ಮಾಡಿ ನ್ಯಾಯ ಪಡೆಯೋಣ ಎಂದು ರೈತರಿಗೆ ಧೈರ್ಯತುಂಬಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 