ಬೆಂಗಳೂರು, ಮೇ 21,ಕಾರ್ಮಿಕ ಕಾನೂನುಗಳ ತಿದ್ದುಪಡಿ ವಿರೋಧಿಸಿ 9 ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತಿತರ ಸ್ವತಂತ್ರ ಕಾರ್ಮಿಕ ಸಂಘಟನೆಗಳನ್ನು ಒಳಗೊಂಡ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಮೇ 22 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಗೆ ಕರೆ ನೀಡಿದೆ. ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಂಗವಾಗಿ, ಕರ್ನಾಟಕ ಕಾರ್ಮಿಕ ಸಂಘಗಳ ಜಂಟಿ ಸಮಿತಿ - ನಾಳೆ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ.ಈ ಸತ್ಯಾಗ್ರಹದಲ್ಲಿ ಎಲ್ಲಾ ಕಾರ್ಮಿಕ ಸಂಘಟನೆಗಳ ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಗೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಮುಂಭಾಗ ಸತ್ಯಾಗ್ರಹ ನಡೆಯಲಿದೆ ಎಂದು ಕಾರ್ಮಿಕ ಸಂಘಟನೆಗಳು ತಿಳಿಸಿವೆ.