ನಾಲ್ವರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ
Father commits suicide with four children
ಹರಿಯಾಣ 11: ಬಿಹಾರ ಮೂಲದ ವ್ಯಕ್ತಿಯೊಬ್ಬರು ತನ್ನ ನಾಲ್ವರು ಗಂಡು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಂಗಳವಾರ ಫರಿದಾಬಾದ್‌ನಲ್ಲಿ ನಡೆದಿದೆ.
ಮೃತ
ವ್ಯಕ್ತಿಯನ್ನು ಮನೋಜ್ ಮಹಾತೊ(45) ಮತ್ತು ಮಕ್ಕಳನ್ನು ಪವನ್ (10), ಕರು (9), ಮುರಳಿ (5) ಮತ್ತು ಚೋಟು (3) ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಮಂಗಳವಾರ ಬೆಳಿಗ್ಗೆ ಸಮೀಪದ ಉದ್ಯಾನಕ್ಕೆ ಹೋಗುವುದಾಗಿ ಹೇಳಿ ಮನೋಜ್ ನಾಲ್ವರು ಮಕ್ಕಳೊಂದಿಗೆ ಮನೆಯಿಂದ ಹೊರಟಿದ್ದರು. ಉದ್ಯಾನದ ಬದಲು ರೈಲ್ವೆ ಹಳಿ ಬಳಿಗೆ ಹೋಗಿದ್ದರು. ರೈಲ್ವೆ ಫ್ಲೈಓವರ್ ಅಡಿಯಲ್ಲಿ ರೈಲು ಬರುವುದನ್ನೆ ಕಾಯುತ್ತಿದ್ದ ಮನೋಜ್, ರೈಲು ಬಂದ ತಕ್ಷಣ ನಾಲ್ವರು ಮಕ್ಕಳನ್ನು ಹಿಡಿದು ಹಳಿ ಮೇಲೆ ನಿಂತಿದ್ದಾರೆ. ಈ ವೇಳೆ ಮಕ್ಕಳು ಕಿರುಚಾಡಿದ್ದು, ಮಕ್ಕಳು ತಪ್ಪಿಸಿಕೊಂಡು ಹೋಗದಂತೆ ಬಿಗಿಯಾಗಿ ಹಿಡಿದುಕೊಂಡಿದ್ದಾರೆ. ಮಕ್ಕಳ ಕಿರುಚಾಟ ಕಂಡು ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ಅಷ್ಟರಲ್ಲಿಯೇ ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ ರೈಲು ಐವರ ಮೇಲೆ ಹರಿದಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 