ಹೈದ್ರಾಬಾದ್ ಪ್ರಾಂತದ ಭಾಗವಾದ ಹಿಂದುಳಿದ ವಿಜಯಪುರ ಜಿಲ್ಲೆಗೆ ಮೀಸಲಾತಿ ಒದಗಿಸಲು ಅಂಗವಿಕಲರ ಒಕ್ಕೂಟ ಆಗ್ರಹ
Federation of the Disabled demands reservation for the backward Vijayapura district, part of the Hyd
ಲೋಕದರ್ಶನ ವರದಿ
ಬಸವನಬಾಗೇವಾಡಿ 06 : 371 ಜೆ ಮೀಸಲಾತಿ ಅಡಿ ಬಿಟ್ಟು ಹೋದ ಪ್ರದೇಶವಾದ ವಿಜಯಪುರ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಮೀಸಲಾತಿಗೆ ಸೇರಿಸಲು ಕೇಂದ್ರ ಸರಕಾಕ್ಕೆ ಶಿಫಾರಸ್ಸು ಕಳಿಸಬೇಕೆಂದು ತಾಲೂಕು ಅಂಗವಿಕಲರ ಒಕ್ಕೂಟ ಬಸವನಬಾಗೇವಾಡಿ ತಾಲೂಕು ಘಟಕದ ಮುಖಂಡರು ತಹಶೀಲ್ದಾರ ವಾಯ್ ಎಸ್ ಸೋಮನಕಟ್ಟಿ ಅವರ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ತಾಲೂಕು ಸಂಚಾಲಕರಾದ ಮಲ್ಲಿಕಾರ್ಜುನ ಬಿರಾದಾರ ಅವರು ಮಾತನಾಡಿ ಹೈದ್ರಾಬಾದ್ ಪ್ರಾಂತದ ಭಾಗವಾಗಿದ್ದ ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಯಿಂದ ಕೈ ಬಿಡುವ ಮೂಲಕ ಜಿಲ್ಲೆಯ ಜನರಿಗೆ ಅನ್ಯಾಯ ಮಾಡಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಕೂಡಲೇ ಬಿಟ್ಟು ಹೋದ ಪ್ರದೇಶಕ್ಕೆ ಮೀಸಲಾತಿ ಒದಗಿಸಬೇಕೆಂದು ಆಗ್ರಹಿಸಿದರು.
ಜಿಲ್ಲೆಯ ಸಾರಿಗೆ ವ್ಯವಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ. ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯದಡಿ ಬರುತ್ತದೆ. ಹೀಗಿದ್ದರೂ ಕೂಡ. ಜಿಲ್ಲೆಯನ್ನು ಕಲ್ಯಾಣ ಕರ್ನಾಟಕದಡಿ ಏಕೆ ಸೇರಿಸಿಲ್ಲ ಎಂದು ಸರಕಾರ ಮತ್ತು ಜಿಲ್ಲೆಯ ಸಚಿವರು, ಸಂಸದರು ಮತ್ತು ಶಾಸಕರು ಉತ್ತರಿಸಬೇಕೆಂದು ಒತ್ತಾಯಿಸಿದ ಅವರು ನಂಜುಂಡಪ್ಪ ವರದಿ ಪ್ರಕಾರ ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಹಿಂದುಳಿದ ವಿಜಯಪುರ ಜಿಲ್ಲೆಗೆ 371 ಜೆ ಪ್ರಾದೇಶಿಕ ಮೀಸಲಾತಿ ಅಡಿ ಸೇರಿಸಲು ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಂಡು ಭಾರತ ಸರಕಾರಕ್ಕೆ ಶಿಫಾರಸ್ಸು ಕಳಿಸಿ ವಿಜಯಪುರ ಜಿಲ್ಲೆಗೆ ನ್ಯಾಯ ಒದಗಿಸಿಕೊಡಲು ಸಚಿವರು ಶಾಸಕರು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಹೋರಾಟಗಾರ ಪ್ರಕಾಶ ಸುಂಕದ ಅವರು ಮಾತನಾಡಿ 371ಜೆ ಮೀಸಲಾತಿ ವಿಷಯದಲ್ಲಿ ವಿಜಯಪುರ ಜಿಲ್ಲೆಗೆ ಸರಕಾರಿ ನೌಕರಿ ಮತ್ತು ಶಿಕ್ಷಣದಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ ಕೂಡಲೇ ಜಿಲ್ಲೆಯ ಸಚಿವರು ಶಾಸಕರು ಮೀಸಲಾತಿ ಒದಗಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಮುಖಂಡರಾದ ನಾಗೇಶ ಗಬ್ಬೂರ ಶಿವಾನಂದ ನಾಗೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 