ಹಸಿದವರಿಗೆ ಅನ್ನ ನೀಡುವುದು ಎಲ್ಲ ಕಾರ್ಯಗಳಂತಲೂ ಪುಣ್ಯದ ಕಾರ್ಯ
Feeding the hungry is as virtuous as any other act.
ಗದಗ: ಹಸಿದವರಿಗೆ ಅನ್ನ ನೀಡುವುದು ಎಲ್ಲ ಕಾರ್ಯಗಳಂತಲೂ ಪುಣ್ಯದ ಕಾರ್ಯವಾಗಿದೆ ಇದನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಶ್ರೀ ಅನ್ನಪೂರ್ಣೇಶ್ವರಿ ಪ್ರಸಾದ ನಿಲಯದ ಸೇವಾ ಕಾರ್ಯ ಶ್ಲಾಘನೀಯವಾಗಿದೆ ಎಂದು ಖ್ಯಾತ ಮನೋರೋಗ ಚಿಕಿತ್ಸಕ ಹಾಗೂ ಜ. ತೋಂಟದಾರ್ಯ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಆನಂದ ಪಾಂಡುರಂಗಿ ಅವರು ಹೇಳಿದರು.
ಅವರು ನಗರದ ಮಹಾತ್ಮಾ ಗಾಂಧಿ ವೃತ್ತದ ಹತ್ತಿರ ಹಳೇ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ಪ್ರಸಾದ ನಿಲಯ (5ರೂ.ಗೆ ಹೊಟ್ಟೆ ತುಂಬಾ ಊಟ)ದಲ್ಲಿ ಪ್ರಸಾದ ವಿತರಿಸಿ ಮಾತನಾಡಿದರು.ಇನ್ನೋರ್ವ ಅತಿಥಿಗಳಾದ ಕುಷ್ಟಗಿಯ ಮಾಜಿ ಶಾಸಕ ಕೆ. ಶರಣಪ್ಪನವರು ಸೇವೆಯ ಬಗ್ಗೆ ಅಭಿಮಾನ ವ್ಯಕ್ತ ಪಡಿಸಿದರು.ಈ ಸಂದರ್ಭದಲ್ಲಿ ಜ. ತೋಂಟದಾರ್ಯ ವಿದ್ಯಾಪೀಠದ ಆಡಳಿತಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟಿ, ಹಿರಿಯರಾದ ಎಸ್ ಎಸ್. ಕಳಸಾಪೂರ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಪ್ರಸಾದ ನಿಲಯದ ಗೌರವಾಧ್ಯಕ್ಷರಾದ ಎಸ್. ಎಸ್. ಕಳಸಾಪುರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 