ಡಾ. ಎಸ್. ಎಂ. ದೊಡಮನಿಗೆ ಗೌರವ ಸನ್ಮಾನ
Felicitation for Dr. S. M. Dodamani
ಬೆಳಗಾವಿ 3: ವೈದ್ಯಕೀಯ ಕ್ಷೇತ್ರದಲ್ಲಿ ಅಪರೂಪದ ಸೇವೆ ಸಲ್ಲಿಸುತ್ತಿರುವ ಸಾಯಿ ಹಾಸ್ಪಿಟಲ್ ನ ವ್ಯವಸ್ಥಾಪಕ ನಿರ್ದೇಶಕ ಡಾ. ಎಸ್. ಎಂ. ದೊಡಮನಿ ಅವರಿಗೆ ಅಂತರರಾಷ್ಟ್ರೀಯ ವೈದ್ಯರ ದಿನದಂದು ಪ್ರೋತ್ಸಾಹ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಡಾ. ದೊಡಮನಿಯವರು ಕಳೆದ ಮೂರು ದಶಕಗಳಿಂದ ಆರೋಗ್ಯ ಸೇವೆಯನ್ನು ತಮ್ಮ ಧ್ಯೇಯವನ್ನಾಗಿಸಿಕೊಂಡು ವಿಶೇಷವಾಗಿ ಬಡ ಹಾಗೂ ಅನಾಥ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡುವ ಮೂಲಕ ಮಾನವೀಯತೆ ಮೆರೆದವರು. ಸಮಾಜದ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವ ಅವರ ಸೇವೆಯನ್ನು ಗುರುತಿಸಿ ಈ ಸನ್ಮಾನವನ್ನು ನೀಡಲಾಯಿತು.
ಪ್ರೋತ್ಸಾಹ ಫೌಂಡೇಶನ್‌ನ ಕಾರ್ಯದರ್ಶಿ ಸಂತೋಷ ಹೊಂಗಲ, ಹಿರಾಲಾಲ ಚವ್ಹಾಣ, ರವಿ ಹೊಂಗಲ, ಸಂಜಯ ಚೌಗುಲೆ ಹಾಗೂ ಸುನಿತಾ ಹೊಂಗಲ ಡಾ. ದೊಡಮನಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 