ನೂತನ ಸಚಿವ ರುದ್ರ​‍್ಪ ಲಮಾಣಿಗೆ ಸನ್ಮಾನ: ಜಿಲ್ಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರದ ಭರವಸೆ

ನೂತನ ಸಚಿವ ರುದ್ರ​‍್ಪ ಲಮಾಣಿಗೆ ಸನ್ಮಾನ: ಜಿಲ್ಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರದ ಭರವಸೆ  Felicitation for new Minister Rudrappa Lamani: Assurance of full cooperation for the district's deve

ಲೋಕದರ್ಶನ ವರದಿ 

ಹಾವೇರಿ, ಆ.6: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ನೂತನ ಸಚಿವ ರುದ್ರ​‍್ಪ ಲಮಾಣಿ ಅವರು ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ (ರಿ.)  ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಹೇಳಿದರು.  

ನಗರದ ಡಾ. ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ (ರಿ.) ಹಾಗೂ ಡಾ. ಬಿ.ಆರ್‌. ಅಂಬೇಡ್ಕರ್ ವಿವಿಧ ಸಂಘಟನೆಗಳ ವತಿಯಿಂದ ನೂತನ ಸಚಿವ ರುದ್ರ​‍್ಪ ಲಮಾಣಿ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಉಡಚಪ್ಪ ಮಾಳಗಿ, ಕಾಂಗ್ರೆಸ್ ಪಕ್ಷವು ರುದ್ರ​‍್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಿರುವುದು ಸ್ವಾಗತಾರ್ಹ ನಿರ್ಧಾರವಾಗಿದೆ. ಈ ಮೂಲಕ ಸಮಾಜಕ್ಕೆ ನ್ಯಾಯ ದೊರೆತಂತಾಗಿದೆ.

ಈ ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ವೇಳೆ ಅವರು ರಾಜ್ಯದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಿದ್ದರು. ಅವರ ಅನುಭವ ಮತ್ತು ಆಡಳಿತ ಸಾಮರ್ಥ್ಯದಿಂದ ಹಾವೇರಿ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಪಕ್ಷಾತೀತವಾಗಿ ಸಚಿವರೊಂದಿಗೆ ಕೈಜೋಡಿಸಬೇಕು. ರುದ್ರ​‍್ಪ ಲಮಾಣಿ ಅವರಿಗೆ ಪ್ರಮುಖ ಖಾತೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದರು.  

ಇದೇ ವೇಳೆ ಹಾವೇರಿ ಜಿಲ್ಲೆಯ ಮತ್ತೊಬ್ಬ ಹಿರಿಯ ನಾಯಕ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಸಹ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದರು.  

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಎಫ್‌.ಎನ್‌. ಗಾಜೀಗೌಡ್ರ, ಪ್ರಭುಗೌಡ ಬಿಷ್ಟನಗೌಡ್ರ, ಎಂ.ಎಂ. ಮೇದೂರ, ಗುಡ್ಡನಗೌಡ ಅಂದಾನಿಗೌಡ್ರ,

ಶಂಕರ ಮೆಹರವಾಡೆ, ಫಕ್ಕೀರಗೌಡ ಗಾಜೀಗೌಡ್ರ, ಮಾಲತೇಶ ಕರ್ಜಗಿ, ಅಶೋಕ ಮರೇಣ್ಣನವರ ಸೇರಿದಂತೆ ಕಾಂಗ್ರೆಸ್ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.