ಕೆಎಲ್ಇ ಸಂಸ್ಥೆಯ ನಿವೃತ್ತ ಕುದರಿ ದಂಪತಿಗೆ ಸನ್ಮಾನ
Felicitation for retired KLE Society couple, Mr. and Mrs. Kudari
ಲೋಕದರ್ಶನ ವರದಿ
ಹುಬ್ಬಳ್ಳಿ 13: ಬಸವೇಶ್ವರ ನಗರದ ನಿವಾಸಿ, ಕೆಎಲ್ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ನಿವೃತ್ತ ಅಧೀಕ್ಷಕ ಕಾಶಿನಾಥ ಮಲ್ಲಪ್ಪ ಕುದರಿ ಹಾಗೂ ಅನಸೂಯಾ ಕಾಶಿನಾಥ ಕುದರಿ ದಂಪತಿಯ 65ನೇ ವಿವಾಹ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಶಾಲು ಹೊದಿಸಿ, ಹಾರ ಹಾಕಿ ದಂಪತಿಯನ್ನು ಗೌರವಿಸಿದರು. ದಂಪತಿಗೆ ಶುಭಾಶಯಗಳನ್ನು ಕೋರಿದ ಅವರು, ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ಹಾರೈಸಿದರು.
ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಹಾಗೂ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ಸುರೇಶ್ ಡಿ. ಹೊರಕೇರಿ ಮಾತನಾಡಿ, ಕಾಶಿನಾಥ ಕುದರಿ ಅವರ ಸೇವೆ ಹಾಗೂ ವ್ಯಕ್ತಿತ್ವವನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಡಾ. ಶಶಿಧರ ಕಾಶಿನಾಥ ಕುದರಿ, ಸೀಮಾ ಶಶಿಧರ ಕುದರಿ, ಕುಟುಂಬ ಸದಸ್ಯರು ಹಾಗೂ ಬಂಧು-ಬಳಗ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 