ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಿಗೆ ಸನ್ಮಾನ
Felicitation for the State President of the Youth Congress Committee
ದೇವರಹಿಪ್ಪರಗಿ 14: ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ದಿ.14.06.2025 ರಂದು ಶನಿವಾರ ಬೆಳಗ್ಗೆ ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಹೆಚ್.ಎಸ್ ಮಂಜುನಾಥ ಅವರಿಗೆ ದೇವರಹಿಪ್ಪರಗಿ ಮತಕ್ಷೇತ್ರದ ಯುವ ಕಾಂಗ್ರೆಸ್ ಘಟಕದಿಂದ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯಧ್ಯಕ್ಷರು ಬರುವಂತ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಿಮ್ಮ ಕ್ಷೇತ್ರದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಪಕ್ಷ ಬೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪ್ರಮುಖ ಪಾತ್ರ ವಹಿಸಬೇಕು. ಬಿಜೆಪಿ, ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಎಲ್ಲಾ ಪದಾಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೋಯಿನ ಅಹ್ಮದ್ ಶೇಖ್, ಕ್ಷೇತ್ರದ ಅಧ್ಯಕ್ಷ ಸಲೀಂ ವಠಾರ, ಉಪಾಧ್ಯಕ್ಷರಾದ ವಿನಯಕುಮಾರ ಪಾಟೀಲ,ಪ್ರ. ಕಾ ಅರವಿಂದ ಬಿರಾದಾರ, ಬ್ಲಾಕ್ ಅಧ್ಯಕ್ಷರುಗಳಾದ ಸೋಮನಗೌಡ. ಎಸ್.ಅನೆಸೂರ, ಅರವಿಂದ ರಾಠೋಡ, ರಿಹಾನ್ ಕೆರೂರ, ಉಪಾಧ್ಯಕ್ಷ ಮಹಾಂತೇಶ ಚೆಲವಾದಿ ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 