ವಿಜಯಪುರ ಮಾ.27: ಜಿಲ್ಲೆಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನೂತನವಾಗಿ ಸದಸ್ಯರಾಗಿ ಆಯ್ಕೆಯಾದ ಪ್ರಸಾದ ಧನಸಿಂಗ್ ಚವ್ಹಾಣ, ಅರವಿಂದ ಡಿ ಸಾಲವಾಡಗಿ, ಮಹಾದೇವ ಸಿದ್ರಾಮಪ್ಪ ಕಾಂಬಳೆ, ಮಳಸಿದ್ದ ನಾಲ್ನೋಡಿ ಅವರನ್ನು ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಹಾಗೂ ವಿವಿಧ ಅಧಿಕಾರಿಗಳು ಸನ್ಮಾನಿಸಿದರು.
ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರು ಸನ್ಮಾನ ಸ್ವೀಕರಿಸಿ ಮಾತನಾಡಿ, ಪರಿಶಿಷ್ಟ ಜಾತಿ/ಪಂಗಡದ ಜನರ ಸರ್ವತೋಮುಖ ಅಭಿವೃದ್ದಿಗಾಗಿ ಶ್ರಮಿಸಲಾಗುವುದು ಎಂದು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಜೆ ಇಂಡಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.