ಗುರ್ಲಾಪೂರದಲ್ಲಿ ಬಿ.ವೈ. ಮೊಮಿನ್ ಗುರುಗಳಿಗೆ ಸತ್ಕಾರ
Felicitation of B.Y. Momin Guruji in Gurlapur
ಲೋಕದರ್ಶನ ವರದಿ
ಗುರ್ಲಾಪೂರ 17: ಗ್ರಾಮದ ಪಿ.ಎಂ. ಶ್ರೀ ಶಂಕರ ಮಾದರಿ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ “ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪಡೆದ ಶಾಲೆಯ ಶಿಕ್ಷಕ ಶ್ರೀ ಬಿ.ವೈ. ಮೊಮಿನ್ ಅವರನ್ನು ಸನ್ಮಾನಿಸಲಾಯಿತು.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಎಲ್.ಪಿ. ನೇಮಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕ ವೃಂದ ಸತ್ಕರಿಸಿದರು. ಶಾಲೆಯ 5ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿಯೂ ಮೊಮಿನ್ ಗುರುಗಳಿಗೆ ಶಾಲು ಹೊದಿಸಿ, ಹಣ್ಣು-ಹಂಪಲು ನೀಡಿ ಗೌರವಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ತಿಗಡಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗೋ ಪಾಲ ಪತ್ತಾರ ಮಾತನಾಡಿ, ಮೊಮಿನ್ ಅವರಿಗೆ ದೊರೆತ ಪ್ರಶಸ್ತಿಯಿಂದ ಶಾಲೆಯ ಕೀರ್ತಿ ಹೆಚ್ಚಾಗಿದೆ ಎಂದು ಹೇಳಿದರು. ಇಂತಹ ಪ್ರಶಸ್ತಿಗಳು ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಮತ್ತಷ್ಟು ಪ್ರೇರಣೆ ನೀಡಲಿವೆ ಎಂದರು.
ಸತ್ಕಾರ ಸ್ವೀಕರಿಸಿ ಮಾತನಾಡಿದ ಮೊಮಿನ್ ಗುರುಗಳು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನೀಡಿದ ಗೌರವವನ್ನು ಎಂದಿಗೂ ಮರೆಯುವುದಿಲ್ಲ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ, ಅವರ ಭವಿಷ್ಯ ರೂಪಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ ಸಸಾಲಟ್ಟಿ ಅವರು ಮೊಮಿನ್ ಗುರುಗಳ ಸೇವೆ ಹಾಗೂ ಶಾಲೆಗೆ ನೀಡಿದ ಕೊಡುಗೆಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮಯ್ಯ ಸಾಲಿಮಠ ಸ್ವಾಗತಿಸಿದರು. ಕವಿತಾ ಸೂರಣ್ಣವರ ನಿರೂಪಿಸಿ, ವಂದಿಸಿದರು.
ಗುರ್ಲಾಪೂರ ಗ್ರಾಮದ ಕಂಬಳಿ ಪ್ಲಾಟ್ನಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ 15ನೇ ವರ್ಷದ ಭಜನೆ ಹಾಗೂ ಪ್ರವಚನ ಕಾರ್ಯಕ್ರಮದ ಮಹಾಮಂಗಲಾರತಿ ಭಾನುವಾರ ನಡೆಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 