ಬಿಇಓ ಮೋಹನಕುಮಾರ ಅವರಿಗೆ ಸನ್ಮಾನ
Felicitation of BEO Mohanakumar
ಲೋಕದರ್ಶನ ವರದಿ
ಇಂಡಿ 25 : ತಾಲೂಕಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಮೋಹನಕುಮಾರ ಪಿ ಅವರನ್ನು ಇಂದು ಅವರ ಕಚೇರಿ ಆವರಣದಲ್ಲಿ ಪ್ರಾಥಮಿಕ ಶಾಲಾ ಪತ್ತಿನ ಸೊಸೈಟಿ ವತಿಯಿಂದ ಸನ್ಮಾನಿಸಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಬಿಇಓ, ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಶ್ರಮಿಸೋಣ. ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡೋಣ. ಶಾಲೆಯ ಸರ್ವಾಂಗೀಣ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ, ಶಿಕ್ಷಣ ಸಂಯೋಜಕರು ಎನ್ ಪಿ ಪೂಜಾರಿ, ಆನಂದ ಹುಣಸಗಿ ಸಿ ಆರ್ ಪಿ ಪರ್ವೇಜ್ ಪಟೇಲ್ ಬಿ ಆರ್ ಪಿ ಅಶೋಕ್ ರಾಥೋಡ್, ಸೊಸೈಟಿ ಅಧ್ಯಕ್ಷರಾದ ಎಸ್ ವಿ ಹರಳಯ್ಯ ಸಂಘದ ಪದಾಧಿಕಾರಿಗಳಾದ ಜೆ ಎ ಚೌಡಿಹಾಳ, ಟಿ ಕೆ ಪೂಜಾರಿ ಸೇರಿದಂತೆ ಇನ್ನು ಅನೇಕರು ಉಪಸ್ಥಿತರಿದ್ದರು.
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ 