ಹುಬ್ಬಳ್ಳಿ 13: ಜೈಂಟ್ಸ ಗ್ರುಪ್ ಆಫ್ ಹುಬ್ಬಳ್ಳಿ ಸಹೇಲಿ ಅಧ್ಯಕ್ಷ ಭಾರತಿ ವಾಲಿ ಅವರು ಸಹೇಲಿ ಅಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿದ ಪ್ರಯುಕ್ತ ಹಾಗೂ ಹುಟ್ಟು ಹಬ್ಬ ಆಚರಿಸಿಕೊಂಡ ಶುಭ ಸಂದರ್ಭದಲ್ಲಿ ಭಾರತಿ ವಾಲಿ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಮಾಲಾರ್ಪಣೆ ಮಾಡಿ, ಗ್ರಂಥ ನೀಡಿ ಗೌರವ ಪೂರ್ವಕವಾಗಿ ಹೆಮ್ಮೆ, ಅಭಿಮಾನದಿಂದ ಸನ್ಮಾನಿಸಿದರು.
ಹುತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಹುಟ್ಟು ಹಬ್ಬದ ಶುಭಾಶಯ ಕೋರಿದರು. ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ ಪ್ರೊ ಎಸ್.ಎಂ.ಸಾತ್ಮಾರ, ತಾಲೂಕು ಕಸಾಪದ ಅಧ್ಯಕ್ಷ ವಿದ್ಯಾ ವಂಟಮುರಿ, ರೇಖಾ ಚಿನಿವಾಲ, ಅನಸೂಯಾ ಪಾಟೀಲ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಪಾರ್ವತಿ ಮಠದ, ಸಿದ್ಧಮ್ಮ ಅಡವೆಣ್ಣವರ, ಶೋಭಾ ಸವದತ್ತಿ, ಕವಿತಾ ಅಯ್ಯರ್‌ಸಂಗ, ತಾನ್ವಿ, ಮುಂತಾದವರು ಭಾಗವಹಿಸಿದ್ದರು.