ಹುಬ್ಬಳ್ಳಿ 15: ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರು, ಪರಮಪೂಜ್ಯ ಶ್ರೀ ಸ್ವಾಮಿ ತೇಜಸಾನಂದಜೀ ಮಹಾರಾಜ ಅವರು ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಭಾಗವಹಿಸಿ, ಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಹುಬ್ಬಳ್ಳಿಗೆ ಆಗಮಿಸಿದ ಶುಭ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಸ್ವಾಮಿ ತೇಜಸಾನಂದಜೀ ಮಹಾರಾಜ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವಾರೆ್ಣ ಸಲ್ಲಿಸಲಾಯಿತು.
ಪರಮಪೂಜ್ಯ ಶ್ರೀ ಸ್ವಾಮಿ ತೇಜಸಾನಂದಜೀ ಮಹಾರಾಜ ಅವರು ಭಕ್ತರಿಗೆ ಪುಣ್ಯತೀರ್ಥ, ಪ್ರಸಾದ ನೀಡಿ ಶುಭಾಶೀರ್ವಾದ ಮಾಡಿದರು. ಪರಮಪೂಜ್ಯ ಶ್ರೀ ಸ್ವಾಮಿ ಬುದ್ಧಿಯೋಗಾನಂದಜೀ ಮಹಾರಾಜ, ಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ತಬಲಾ ಕಲಾವಿಧ ಡಾ. ನಾಗಲಿಂಗ ಮುರಗಿ, ಅರುಣ ಸಂಶಿ, ಮಲ್ಲಿಕಾರ್ಜುನ, ಎನ್.ಜೆ.ಬಡಿಗೇರ, ಬಸವರಾಜ, ಭಕ್ತರು, ಉಪಸ್ಥಿತರಿದ್ದರು.