ಗಣೇಶೋತ್ಸವದಲ್ಲಿ ಶಾಂತಿ ಕಾಪಾಡಿದ ಮಂಡಳಿಗಳಿಗೆ ಸನ್ಮಾನ
Felicitations to committees that maintained peace during Ganeshotsava
ಯಮಕನಮರಡಿ 9: ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಶಾಂತಿ, ಸೌಹಾರ್ದತೆಯಿಂದ ಗಣೇಶೋತ್ಸವ ಆಚರಿಸಿ ಪೊಲೀಸ್ ನಿಯಮಗಳನ್ನು ಪಾಲಿಸಿದ ಗಣೇಶೋತ್ಸವ ಮಂಡಳಿಗಳ ಸದಸ್ಯರನ್ನು ಇತ್ತೀಚೆಗೆ ನಡೆದ ಶಾಂತಿ ಸಭೆಯಲ್ಲಿ ಸನ್ಮಾನಿಸಲಾಯಿತು. ಪೊಲೀಸ್ ಇಲಾಖೆಯಿಂದ ಸೂಕ್ತ ಬಹುಮಾನ ಹಾಗೂ ಸನ್ಮಾನ ನೀಡುವ ಯೋಜನೆ ರೂಪಿಸಲಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಯಮಕನಮರಡಿ ಪೊಲೀಸ್ ಠಾಣೆ ಮಾದರಿಯಾಗಿದೆ. ಕಳೆದ ವರ್ಷ ಶಾಂತಿ ಮತ್ತು ಸೌಹಾರ್ದತೆಯಿಂದ ಗಣೇಶೋತ್ಸವ ಆಚರಿಸಿದ ಸ್ಥಳೀಯ ಗಣೇಶೋತ್ಸವ ಮಂಡಳಿಗಳ ಸದಸ್ಯರನ್ನು ಠಾಣೆಗೆ ಆಹ್ವಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಠಾಣೆಯ ಸಿಪಿಐ ಜಾವೀದ್ ಮುಸಾ ಪೂರಿ ಹಾಗೂ ಪಿಎಸ್‌ಐ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 