ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಕಂಪ್ಲಿ 10: ರಾಷ್ಟ್ರೀಯ ಮತದಾನ(ಎನ್‌ವಿಡಿ) ದಿನಾಚರಣೆ ಪ್ರಯುಕ್ತ ಬಳ್ಳಾರಿ ನಗರದ ಸರಳಾದೇವಿ ಕಾಲೇಜಿನಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕಂಪ್ಲಿ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕೀರ್ತಿ ಪತಾಕಿ ಹಾರಿಸಿದ್ದಾರೆ. ಇಲ್ಲಿನ ನಡೆದ ಜಿಲ್ಲಾ ಮಟ್ಟದ ಪ್ರಬಂಧ(ಕನ್ನಡ) ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಎನ್.ಕವಿತಾ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಮತ್ತು ಪ್ರಬಂಧ(ಇಂಗ್ಲೀಷ್)ಸ್ಪರ್ಧೆಯಲ್ಲಿ ಯು.ಭಾರತಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಧಾಪುಗಾಲು ಇಟ್ಟಿದ್ದಾರೆ. ಮತ್ತು ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಯಲ್ಲಿ ಕೆಲ ವಿದ್ಯಾರ್ಥಿಗಳು ದ್ವಿತೀಯ, ತೃತೀಯ ಸ್ಥಾನಕ್ಕೆ ಸೈ ಎನ್ನಿಸಿಕೊಂಡರು. ಈ ಸ್ಪರ್ಧೆಯಲ್ಲಿ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಮತ್ತು ಕಂಪ್ಲಿಗೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.