ವಿದ್ಯಾರ್ಥಿನಿಯರು ಶಿಕ್ಷಣಕ್ಕೆ ಆದ್ಯತೆ ನೀಡಿ: ಡಾ. ನಾಗಲಕ್ಷ್ಮೀ ಚೌಧರಿ
Female students should prioritize education: Dr. Nagalakshmi Chowdary
ಲೋಕದರ್ಶನ ವರದಿ
ಗದಗ 01 : ವಿದ್ಯಾರ್ಥಿನಿಯರು ತಮ್ಮ ಶಿಕ್ಷಣ ಪೂರ್ಣಗೊಳಿಸಿ ಸ್ವಾವಲಂಬಿಗಳಾಗಬೇಕು. ಭವಿಷ್ಯ ಮತ್ತು ಗುರಿ ಸಾಧನೆಗೆ ಮೊದಲ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು. ಗದಗ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರೊಂದಿಗೆ ಸಂವಾದ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಯೋಸಹಜ ಆಕರ್ಷಣೆಯಿಂದ ಪ್ರೀತಿ, ಪ್ರಣಯ ಅಥವಾ ವಿವಾಹದಂತಹ ನಿರ್ಧಾರಗಳಿಗೆ ವಿದ್ಯಾರ್ಥಿನಿಯರು ಆತುರಪಡಬಾರದು.
ಶಿಕ್ಷಣ, ಸ್ವಾವಲಂಬನೆ ಮತ್ತು ಗುರಿ ಸಾಧನೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ನೀಡಿದರು. ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸಬೇಕು. ಅಪರಿಚಿತರ ಫ್ರೆಂಡ್ ರಿಕ್ವೆಸ್ಟ್ಗಳನ್ನು ಸ್ವೀಕರಿಸಬಾರದು. ಡೇಟಿಂಗ್ ಆ್ಯಪ್ಗಳು ಹಾಗೂ ನಕಲಿ ಪ್ರೀತಿಯ ಮಾತುಗಳಿಗೆ ಮರುಳಾಗಿ ಅಪಾಯಕ್ಕೆ ಸಿಲುಕಬಾರದು ಎಂದು ಎಚ್ಚರಿಸಿದರು. ಮೊಬೈಲ್ ಬಳಕೆಯನ್ನು ನಿಯಂತ್ರಿಸಿ ಪ್ರತಿದಿನ ಓದಿಗೆ ಕನಿಷ್ಠ 4 ರಿಂದ 6 ಗಂಟೆ ಸಮಯ ಮೀಸಲಿಡಬೇಕು. ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸದಿಂದ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬಹುದು ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.
ಮಹಿಳೆಯರಿಗೆ ಗೌರವ ನೀಡುವ ಸಂಸ್ಕಾರ ಮನೆಗಳಿಂದಲೇ ಆರಂಭವಾಗಬೇಕು. ಹೆಣ್ಣುಮಕ್ಕಳ ರಕ್ಷಣೆ ಮತ್ತು ಕುಟುಂಬ ಸೌಹಾರ್ದತೆಗಾಗಿ ಗದಗ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಗಳನ್ನು ಅವರು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ ಆರ್., ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ ಕೆ.ಆರ್., ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 