ಈದ್-ಮಿಲಾದ ಹಬ್ಬ: ಶಾಂತಿ ಸಭೆ ಆಯೋಜನೆ
Festival of Eid-Mila: Shanti Sabha Plan
ಲೋಕದರ್ಶನ ವರದಿ
ದಾಂಡೇಲಿ 18 : ನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ಈದ್-ಮಿಲಾದ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಮಾತನಾಡಿದ ಸಿ.ಪಿ.ಐ ಶಿವಾನಂದ ಅಂಬಿಗೇರ್, ನಗರದಲ್ಲಿ ಈದ್-ಮಿಲಾದ ಹಬ್ಬವನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದತೆಯಿಂದ ಆಚರಿಸುವಂತೆ ಸಾರ್ವಜನಿಕರಿಗೆ ಮತ್ತು ವಿವಿಧ ಈದ್-ಮಿಲಾದ ಮುಖಂಡರಿಗೆ ರಚನಾತ್ಮಕ ಸಲಹೆಗಳನ್ನು ನೀಡಿದರು.
ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಎಲ್ಲರೂ ಪೊಲೀಸರೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು. ಸಭೆಯಲ್ಲಿ ಪಿಎಸ್‌ಐಗಳಾದ ಅಮೀನ್ ಅತ್ತಾರ್, ಶಿವಾನಂದ ನಾವದಗಿ, ಕಿರಣ್ ಪಾಟೀಲ್ ಸೇರಿದಂತೆ ಪೊಲೀಸ್ ಸಿಬ್ಬಂದಿ, ವಿವಿಧ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 