ಗದಗ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೊಸಡಂಬಳ, ಡಂಬಳ ಹಾಗೂ ಡೋಣಿ ತಾಂಡಾ ಗ್ರಾಮಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಗದಗ ಹಾಗೂ ಗ್ರಾಮ ಪಂಚಾಯತ ಇವರ ಸಹಯೋಗದಲ್ಲಿ ಗ್ರಾಮ ಸಂಪರ್ಕ ಯೋಜನೆ ಅಡಿಯಲ್ಲಿ ಜಾನಪದ ಮತ್ತು ಬೀದಿ ನಾಟಕದ ಮೂಲಕ ಸರ್ಕಾರದ ಯೋಜನೆಯ ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಜರುಗಿತು.
ಸಿದ್ಧಲಿಂಗೇಶ್ವರ ಜಾನಪದ ಕಲಾತಂಡ ಅಡವಿಸೋಮಾಪೂರ ಹಾಗೂ ಗುರು ಶಿಷ್ಯ ಪರಂಪರೆ ಜಾನಪದ ಕಲಾತಂಡ ಲಕ್ಕುಂಡಿ ಜಾನಪದ ಕಲಾ ತಂಡದವರು ಗ್ರಾಮದ ಸ್ವಚ್ಚತೆ ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳಾದ ಕಿಸಾನ್ ಸಮ್ಮಾನ್, ಸಹಾಯಧನ, ನೇಕಾರರು, ಮೀನುಗಾರರ ಸಾಲಮನ್ನಾ, ರೈತರ ಸಾಲಮನ್ನಾ, ಆಯುಷ ಸಮ್ಮಾನ್, ಹನಿ ನೀರಾವರಿ ಯೋಜನೆ, ಮಾತೃ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ, ಕೃಷಿಭಾಗ್ಯ ಯೋಜನೆ, ಶಾದಿ ಭಾಗ್ಯ ಯೋಜನೆ, ವಿವಿಧ ಯೋಜನೆಗಳ ಕುರಿತು ಆಯಾ ಇಲಾಖೆಯಲ್ಲಿ ಮಾಹಿತಿ ಪಡೆದು ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಜನಪದ ಗೀತೆ ಹಾಗೂ ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರು ಹಾಗೂ ವಾತರ್ಾ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು