ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ: ವಾಲ್ಮೀಕಿ ಮುಖಂಡರ ಎಚ್ಚರಿಕೆ

ಲೋಕದರ್ಶನ ವರದಿ

ಕೊಪ್ಪಳ 27: ಬಿಜೆಪಿ ಪಕ್ಷ ನೀಡಿದ್ದ ಮಾತಿನಂತೆ ಸಚಿವ ಬಿ. ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡದಿದ್ದರೆ ವಾಲ್ಮೀಕಿ ನಾಯಕ ಸಮಾಜ ಉಗ್ರ ಹೋರಾಟಕ್ಕೆ ಇಳಿಯಲಿದೆ ಎಂದು ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಅವರು ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ವಾಲ್ಮೀಕಿ ನಾಯಕ ಮಹಾಸಭಾದ ತಾಲೂಕ ಅಧ್ಯಕ್ಷ ಹಂಚ್ಯಾಳೆಪ್ಪ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಂತರ ಬಿಜೆಪಿಯಲ್ಲಿ ಈಗ ಮಾಸ್ ಲೀಡರ್ ಅಂದ್ರೆ ಬಿ. ಶ್ರೀರಾಮುಲು. ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪಧರ್ಿಸುವ ತಾಕತ್ತು ಅವರಿಗಿದೆ. ಚುನಾವಣೆ ಸಂದರ್ಭದಲ್ಲಿ ಬಿ. ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಲಾಗುವುದು ಎಂದು ಯಡಿಯೂರಪ್ಪ ವಾಲ್ಮೀಕಿ ಸಮಾಜಕ್ಕೆ ಭರವಸೆ ನೀಡಿದ್ದರು. ಆದರೆ ಅದು ಈಗ ಹುಸಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಾಲ್ಮೀಕಿ ನಾಯಕ ಸಮುದಾಯದ ಮುಖಂಡ ಬಿ.ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಸಿಗುತ್ತದೆ ಎಂಬ ಉದ್ದೇಶದಿಂದ ವಾಲ್ಮೀಕಿ ಸಮುದಾಯ ಬಿಜೆಪಿಯನ್ನು ಬೆಂಬಲಿಸಿದೆ. ಶೇಕಡಾ 80% ರಷ್ಟು ಸಮುದಾಯದ ಜನರು ಬಿಜೆಪಿಗೆ ಮತ ನೀಡಿದ್ದಾರೆ. ಯಡಿಯೂರಪ್ಪ ಸಿಎಂ ಆಗಿ ನಿನ್ನೆ ಖಾತೆ ಹಂಚಿಕೆ ಮಾಡಿದ್ದಾರೆ. ಆದರೆ, ಬಿ. ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ. ಇದರಿಂದ ನಮ್ಮ ಸಮುದಾಯಕ್ಕೆ ನೋವಾಗಿದೆ. ಮುಖ್ಯಮಂತ್ರಿಗಳೇ ಇನ್ನು ಕಾಲ ಮಿಂಚಿಲ್ಲ, ಬಿ. ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಒಂದು ವೇಳೆ ನೀಡದಿದ್ದರೆ ಸಮಾಜದಿಂದ ಉಗ್ರ ಹೋರಾಟಕ್ಕೆ ಇಳಿಯಲಿದೆ ಎಂದು ಅವರು ಎಚ್ಚರಿಕೆ ನೀಡಿದ ಅವರು ಇನ್ನೇರಡು ದಿನಗಳಲ್ಲಿ ಸಭೆ ಕರೆದು ಹೋರಾಟ ದಿನ ನಿರ್ಣಯಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರಾದ ಸುರೇಶ ಡೊಣ್ಣಿ, ಶರಣಪ್ಪ ನಾಯಕ, ರುಕ್ಮಣ್ಣ ಶ್ಯಾವಿ, ಮಲ್ಲಪ್ಪ ಬೇಲೇರಿ,ದೇವೇಂದ್ರಪ್ಪ ಗುನ್ನಳ್ಳಿ, ಶ್ರೀನಿವಾಸ ಪೂಜಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.