ವಿಮಾನದಲ್ಲಿ ಏಕಾಂಗಿ ಪ್ರಯಾಣ ಬೆಳೆಸಿ ಬೆಂಗಳೂರಿಗೆ ಬಂದ ಐದರ ಪೋರ
ಬೆಂಗಳೂರು, ಮೇ 25,ಲಾಕ್ ಡೌನ್ ನಂತರ ದೆಹಲಿಯಿಂದ ಬೆಂಗಳೂರಿಗೆ ಬಂದ ಮೊದಲ ವಿಮಾನದಲ್ಲಿ ಐದು ವರ್ಷದ ಪೋರನೋರ್ವ ಏಕಾಂಗಿಯಾಗಿ ಪ್ರಯಾಣ ಬೆಳೆಸಿ ತಾಯಿ ಮಡಿಲು ಸೇರಿದ್ದಾನೆ.ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಾಗುವುದಕ್ಕೆ ಮುನ್ನವೇ ಐದು ವರ್ಷದ ಬಾಲಕ ದೆಹಲಿಯಲ್ಲಿರುವ ತನ್ನ ಅಜ್ಜಿ ಮನೆಗೆ ತೆರಳಿದ್ದನು. ನಂತರ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಆತ ಸುಮಾರು ಮೂರು ತಿಂಗಳು ದೆಹಲಿಯಲ್ಲಿಯೇ ತಂಗಿದ್ದನು. ಅಧಿಕಾರಿಗಳು ವಿಶೇಷ ಪ್ರಕರಣ ಎಂದು ಪರಿಗಣಿಸಿ ಬಾಲಕನನ್ನು ಬೆಂಗಳೂರಿಗೆ ಕಳುಹಿಸಿದ್ದಾರೆ.ಸೋಮವಾರ ಮೊದಲ ಬಾರಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ವಿಮಾನದಲ್ಲಿ ಬಾಲಕ ಇತರ ಪ್ರಯಾಣಿಕರ ಜೊತೆಗೆ ಒಬ್ಬನೇ ಪ್ರಯಾಣ ಬೆಳೆಸಿದ್ದಾನೆ.ವಿಮಾನ ನಿಲ್ದಾಣದಲ್ಲೇ ಪುತ್ರನ ಬರುವಿಕೆಗಾಗಿ ಕಾದುಕುಳಿತಿದ್ದ ಆತನ ತಾಯಿ ಮಗನನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 