ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ
ಲೋಕದರ್ಶನ ವರದಿ
ಬಳ್ಳಾರಿ,ಡಿ.30: ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಗನುಗುಣವಾಗಿ ಮಂಗಳವಾರ ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 3302 ಮತದಾರರು ನೋಂದಣಿಯಾಗಿದ್ದಾರೆ.
*ಮತದಾರರ ವಿವರ:*
ಬಳ್ಳಾರಿ: ಗಂಡು-458, ಹೆಣ್ಣು-465 ಸೇರಿ ಒಟ್ಟು 923.
ಬಳ್ಳಾರಿ ನಗರ: ಗಂಡು-588, ಹೆಣ್ಣು-636 ಸೇರಿ ಒಟ್ಟು 1224.
ಕಂಪ್ಲಿ: ಗಂಡು-136, ಹೆಣ್ಣು-77 ಸೇರಿ ಒಟ್ಟು 213.
ಕುರುಗೋಡು: ಗಂಡು-93, ಹೆಣ್ಣು-26 ಸೇರಿ ಒಟ್ಟು 119.
ಸಂಡೂರು: ಗಂಡು-206, ಹೆಣ್ಣು-177 ಸೇರಿ ಒಟ್ಟು 383.
ಸಿರುಗುಪ್ಪ: ಗಂಡು-294, ಹೆಣ್ಣು-146 ಸೇರಿ ಒಟ್ಟು 440.
ಒಟ್ಟಾರೆ ಬಳ್ಳಾರಿ ಜಿಲ್ಲೆಯಲ್ಲಿ ಗಂಡು-1775, ಹೆಣ್ಣು-1527 ಸೇರಿ ಒಟ್ಟು 3302 ಮತದಾರರು ನೋಂದಾಯಿಸಿಕೊಂಡಿದ್ದಾರೆ.
ಅಂತಿಮ ಮತದಾರರ ಪಟ್ಟಿಯ ಭೌತಿಕ ಪ್ರಕ್ರಿಯೆಯು ಸಂಬಂಧಿಸಿದ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಯವರ ಕಚೇರಿ, ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಆಯಾ ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಲಭ್ಯವಿದ್ದು, ಮತದಾರರು ಪರೀಶೀಲಿಸಿಕೊಳ್ಳಬಹುದಾಗಿದೆ.
ಇದನ್ನು ಹೊರತುಪಡಿಸಿಯೂ ಸಹ ಇದೊಂದು ನಿರಂತರ ನೋಂದಣಿ ಪ್ರಕ್ರಿಯೆಯಾಗಿರುವ ಹಿನ್ನೆಲೆಯಲ್ಲಿ, ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹ ಮತದಾರರು ಅವಶ್ಯಕ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 