ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಭಾಗ್ಯಶ್ರೀ ಚಿಕಿತ್ಸೆಗೆ ಆರ್ಥಿಕ ನೆರವು
Financial assistance from Lakshmitai Foundation for Bhagyashree's treatment
ಖಾನಾಪುರ 07: ತಾಲೂಕಿನ ಲಾಲವಾಡಿ ಗ್ರಾಮದ ನಿವಾಸಿ ಜ್ಯೋತಿಬಾ ಉತ್ತೂರಕರ್ ಅವರ ಪುತ್ರಿ ಭಾಗ್ಯಶ್ರೀ ಅವರ ತುರ್ತು ಆರೋಗ್ಯ ಚಿಕಿತ್ಸೆಗೆ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವರು ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನೆರವಿನ ಚೆಕ್ ಅನ್ನು ಕುಟುಂಬದವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾಗ್ಯಶ್ರೀ ಅವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಿ ಆರೋಗ್ಯವಂತರಾಗಿ ಮರಳಲಿ ಎಂದು ಹಾರೈಸಿದರು. ಸಂಕಷ್ಟದ ಸಮಯದಲ್ಲಿ ಕುಟುಂಬದೊಂದಿಗೆ ನಿಲ್ಲುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಅಗತ್ಯವಿರುವವರಿಗೆ ನೆರವು ನೀಡುವ ಕಾರ್ಯವನ್ನು ಲಕ್ಷ್ಮೀತಾಯಿ ಫೌಂಡೇಶನ್ ನಿರಂತರವಾಗಿ ಮುಂದುವರಿಸಲಿದೆ ಎಂದು ತಿಳಿಸಿದರು.ಈ ವೇಳೆ ಭಾಗ್ಯಶ್ರೀ ಅವರ ಪಾಲಕರು ಉಪಸ್ಥಿತರಿದ್ದು, ನೆರವಿಗಾಗಿ ಲಕ್ಷ್ಮೀತಾಯಿ ಫೌಂಡೇಶನ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 