ಅಗ್ನಿ ಅವಘಡ: ಫರ್ನೀಚರ್ ಅಂಗಡಿಯಲ್ಲಿನ ಪೀಠೋಪಕರಣಗಳು ಸುಟ್ಟು ಕರಕಲ
Fire accident: Furniture in furniture store gutted
ಲೋಕದರ್ಶನ ವರದಿ,
ಜಮಖಂಡಿ 15: ನಗರದ ಮುಧೋಳ ರಸ್ತೆಯ ಹೊರವಲಯದಲ್ಲಿರುವ ಆಲಗೂರ ಫರ್ನೀಚರ್ ಅಂಗಡಿಯಲ್ಲಿನ ಪೀಠೋಪಕರಣಗಳ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂ,ಗಳ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಅಂಗಡಿಯ ಮಾಲಿಕ ಮಹಮ್ಮದ ಸಾಧಿಕ್ ಆಲಗೂರ ಅವರಿಗೆ ಸೇರಿದ ಕಾರ್ಖಾನೆಯಲ್ಲಿ ಮಧ್ಯಾಹ್ನದ ವೇಳೆಗೆ ನಮಾಜ ಮಾಡಲು ಹೋದ ಸಮಯದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಕಾರ್ಖಾನೆಯಲ್ಲಿದ್ದ ದುಬಾರಿ ಬೆಲೆಯ ಸೋಫಾಗಳು, ಕುರ್ಚಿಗಳು, ಟ್ರೇಜರಿಗಳು ಸಿದ್ಧಪಡಿಸಿದ ಫರ್ನಿಚರ್‌ಗಳು ಹಾಗೂ ಕುಷನ್ ಕಚ್ಚಾ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಜಮಖಂಡಿ ಮತ್ತು ಮುಧೋಳ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳದ ಅಧಿಕಾರಿಗಳಾದ ಎಸ್.ಒ.ಎನ್.ಪಿ ಹೂಗಾರ, ಎಫ್.ಡಿ. ಎ.ವಾಯ್.ಹನಬರಟ್ಟಿ, ಎ.ಎಸ್.ಹಳೇಗೌಡರ, ಎಮ್.ಬಿ.ಕುಂಚನೂರ, ಬಿ.ಎಮ್.ಗಣಾಚಾರಿ, ಎಮ್.ಬಿ.ಬನ್ನಪ್ಪನ್ನವರ, ಬಿ.ಎಸ್.ಬಿರಾದಾರ, ಎಸ್.ಎ.ಮಾಳಶೆಟ್ಟಿ ಅವರು ಅಗ್ನಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ನಿಖರವಾದ ಮಾಹಿತಿ ತಿಳಿದುಬಂದಿರುವುದಿಲ್ಲ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 