ಬೆಂಗಳೂರು.10 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಇ- ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ
ಮಂಗಳವಾರ ಬೆಳಿಗ್ಗೆ ಅಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾದ ಬಗ್ಗೆ ವರದಿಯಾಗಿದೆ.
ನಗರದ ಎಂಎಸ್ ಬಿಲ್ಡಿಂಗ್‌ನಲ್ಲಿರುವ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಇಂದು ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಲಾಯಿತು. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ.ಬೆಂಕಿಯಿಂದ ವಿದ್ಯುತ್ ಉಪಕರಣಗಳು ಸುಟ್ಟುಹೋಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಅಂಭವಿಸಿದೆ ಎಂದು ತಿಳಿದುಬಂದಿದೆ.