ದೆಹಲಿ ಮುದ್ರಣಾಲಯದಲ್ಲಿ ಅಗ್ನಿ ಆಕಸ್ಮಿಕ : ಒಂದು ಸಾವು

ನವದೆಹಲಿ, ಜ 09, ಪೂರ್ವ ದೆಹಲಿಯ ಪಟ್ಪರ್ ಗಂಜ್ ಕೈಗಾರಿಕಾ ಪ್ರದೇಶದಲ್ಲಿ ಕಾಗದ ಮುದ್ರಣಾಲಯದಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಇಂದು ಮುಂಜಾನೆ 2 30ರ ಸುಮಾರಿಗೆ ಅಗ್ನಿ ಆಕಸ್ಮಿಕದ ಕುರಿತು ಮಾಹಿತಿ ದೊರಕಿತು ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿ ತಿಳಿಸಿದ್ದಾರೆ. ಘಟನೆ ನಡೆದ ಕೂಡಲೇ ಒಟ್ಟು 32 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಳಗ್ಗೆ 8.30ರ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.