ಶ್ರೀನಗರ, ಮೇ 13,ವಾಹನ ನಿಲ್ಲಿಸುವಂತೆ ಸೂಚಿಸಿದ್ದರೂ ಅದನ್ನು ಮೀರಿ ಎರಡು ಚೆಕ್‌ಪೋಸ್ಟ್‌ಗಳನ್ನು ದಾಟಿ ಬಂದ ವಾಹನದ ಮೇಲೆ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಕೇಂದ್ರ ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.ಬುದ್ಗಾಮ್‌ನ ನರ್ಬಾಲ್ ಕವೂಸ್‌ನಲ್ಲಿ ಸಿಆರ್‌ಪಿಎಫ್ ಸ್ಥಾಪಿಸಿರುವ ಚೆಕ್‌ಪಾಯಿಂಟ್‌ನಲ್ಲಿ ವಾಹನ ನಿಲ್ಲಿಸುವಂತೆ ಸೂಚಿಸಲಾಯಿತು. ಆದರೆ ಅಲ್ಲಿ ವಾಹನ ನಿಲ್ಲಿಸದೆ ನೇರವಾಗಿ ಚಲಾಯಿಸಿದ್ದಾನೆ. ಮತ್ತೊಂದು ಚೆಕ್ ಪಾಯಿಂಟ್ ಬಳಿ ಬಂದಾಗ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಇದರಿಂದ ವಾಹನದಲ್ಲಿದ್ದ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಯುವಕನನ್ನು ಮೆಹ್ರಾಜುದ್ದೀನ್ ಎಂದು ಗುರುತಿಸಲಾಗಿದ್ದು, ಆತ ಶ್ರೀನಗರದ ಎಸ್‌ಎಚ್‌ಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.