ಶಿರವಾಡದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಅನಾಹುತ
Fire breaks out at solid waste disposal unit in Shirwad
ಕಾರವಾರ 06 : ಕಾರವಾರ ಹೊರ ವಲಯದ ಶಿರವಾಡದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಪ್ಲಾಸ್ಟಿಕ್ ಸಂಗ್ರಹಕ್ಕೆ ಬೆಂಕಿ ಹೊತ್ತಿ ಭಾರೀ ಅವಘಡ ನಡೆದಿದೆ. ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಸುತ್ತಲ ಜನವಸತಿ ಪ್ರದೇಶದಲ್ಲಿ ಆತಂಕ ತಂದಿತು. ವಾತಾವರಣ ಕಲುಷಿತ ಗೊಂಡಿತು. ಬೆಂಕಿ ಕಂಡು ಸ್ಥಳೀಯರು ಆಗ್ನಿ ಶಾಮಕದಳ, ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಆಗ್ನಿ ಶಾಮಕದಳದಿಂದ ಸತತ ನಾಲ್ಕು ತಾಸು ಕಾರ್ಯಾಚರಣೆ ನಡೆದಿದೆ. ಆಗ್ನಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಕಾರವಾರ ಆಗ್ನಿ ಶಾಮಕ ವಾಹನ ಹೊರತುಪಡಿಸಿ, ಬಿಣಗಾ, ಅಂಕೋಲಾ ದಿಂದ ಅಗ್ನಿಶಾಮಕ ವಾಹನಗಳನ್ನು ತರಿಸಲಾಯಿತು. ಅವಘಡ ಪರಿಸ್ಥಿತಿ ನಿಭಾಯಿಸುವ ಪ್ರಯತ್ನ ಯಶಸ್ವಿಯಾಗಿದೆ. ಯಾವುದೇ ಜೀವ ಹಾನಿ ಆಗಿಲ್ಲ ಎಂದು ನಗರಸಭೆಯ ಅಧಿಕಾರಿ ಜಗದೀಶ್ ಹುಲಗಜ್ಜಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 