ನಕ್ಸಲರಿಂದ ರಸ್ತೆ ನಿರ್ಮಾಣ ಕಂಪನಿಯ ಮೂರು ವಾಹನಗಳಿಗೆ ಬೆಂಕಿ
ಗಯಾ, ಅ 26: ಜಿಲ್ಲೆಯ ಅಮಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್ಮಾರ್ವಾ ಗ್ರಾಮದ ಬಳಿ ರಸ್ತೆ ನಿರ್ಮಾಣ ಕಂಪನಿಯ ಮೂರು ವಾಹನಗಳಿಗೆ ನಕ್ಸಲರು ನಿನ್ನೆ ತಡರಾತ್ರಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಸುಮಾರು 12 ನಕ್ಸಲರು ರಸ್ತೆ ನಿರ್ಮಾಣ ಕಂಪನಿಯ ನಿರ್ಮಾಣ ಸ್ಥಳದ ಮೇಲೆ ದಾಳಿ ನಡೆಸಿ ಕಂಪೆನಿಗೆ ಸೇರಿದ ಎರಡು ಟ್ರಾಕ್ಟರುಗಳು ಮತ್ತು ರೋಲರ್ ಯಂತ್ರಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಿರ್ಮಾಣ ಕಂಪನಿಯು ಸುಲಿಗೆ ಹಣವನ್ನು ಪಾವತಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ನಕ್ಸಲರು ವಾಹನಗಳನ್ನು ಸುಟ್ಟುಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ದುಷ್ಕರ್ಮಿಗಳನ್ನು ಬಂಧಿಸಲು ತೀವ್ರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರುತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 