ಪಶ್ಚಿಮ ದೆಹಲಿ ಕಟ್ಟಡವೊಂದರಲ್ಲಿ ಬೆಂಕಿ: 25 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ

 ನವದೆಹಲಿ, ನ 4:   ಪಶ್ಚಿಮ ದೆಹಲಿಯ ಪೀರಾಗರ್ಹ್ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.    ಬೆಂಕಿಯನ್ನು ನಂದಿಸಲು 25 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಗ್ನಿಶಾಮಕ ಸೇವಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿಶಾಮಕ ಕಾರ್ಯಾಚರಣೆ ವೇಳೆ ಕಟ್ಟಡ ಕುಸಿದು ಮೂವರು ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಳೆದ ಮಧ್ಯರಾತ್ರಿ ಬೆಂಕಿ ಸಂಭವಿಸಿರುವ ಕುರಿತು ಕರೆ ಬಂದಿದ್ದು, ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.