ಅರಣ್ಯ ಪ್ರದೇಶದಲ್ಲಿ ಅಗ್ನಿಅವಘಡ: ಸುಮಾರು 20 ಎಕರೆಗೂ ಅಧಿಕ ಅರಣ್ಯ ಪ್ರದೇಶ ಸುಟ್ಟು ಭಸ್ಮ
Fire in forest area: More than 20 acres of forest area burnt to ashes
ಲೋಕದರ್ಶನ ವರದಿ
ಜಮಖಂಡಿ 04: ನಗರದ ಕೆಟ್ಟಕೆರೆ ಹಾಗೂ ನಿಲಗೀರಿ ನಿಂಗಪ್ಪ ದೇವಸ್ಥಾನದ ಹಿಂಭಾಗದ ಅರಣ್ಯ ಪ್ರದೇಶದಲ್ಲಿ ಅಗ್ನಿಅವಘಡದಿಂದ ಸುಮಾರು 20 ಎಕರೆಗೂ ಅಧಿಕ ಅರಣ್ಯ ಪ್ರದೇಶ ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಅರಣ್ಯ ಪ್ರದೇಶದಲ್ಲಿ ಬೇಸಿಗೆ ಇರುವ ಕಾರಣ ನೆಲಕ್ಕೆ ಹೊಂದಿಗೊಂಡಿರುವ ಹುಲ್ಲು ಸಂಪೂರ್ಣವಾಗಿ ಒಣಗಿದ್ದು. ಅದಕ್ಕೆ ಬೆಂಕಿ ತಗುಲಿದಂದರಿಂದ ಕ್ಷಣಾರ್ಧದಲ್ಲೇ ವ್ಯಾಪಕವಾಗಿ ಹರಡಿ ಅರಣ್ಯದ ಬಹು ಭಾಗವನ್ನು ಆವರಿಸಿ ಸಣ್ಣ - ಪುಟ್ಟ ಗಿಡ-ಮರಗಳು ಸುಟ್ಟಿದ್ದು ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಲು ಮರದ ಹಸಿಯ ತಪ್ಪಲಿನಿಂದ ಹೊಡೆದು ಬೆಂಕಿ ನಂದಿಸಲು ಹರಸಾಹಸಪಟ್ಟರು.
ಅಗ್ನಿ ಅವಘಡದ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಬಿಸಿಲಿನ ತಾಪಮಾನ ಹೆಚ್ಚಳ ಹಾಗೂ ಒಣಗಿದ ಗಿಡಗಂಟಿಗಳಿಂದ ಬೆಂಕಿಹೊತ್ತಿಕೊಂಡು ಅರಣ್ಯ ಪ್ರದೇಶ ಸುಮಾರು 20 ಎಕ್ಕರೆಯಷ್ಟು ಸುಟ್ಟಿರುವುದು ಎಂದು ತಿಳಿದುಬಂದಿರುತ್ತದೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 