ಅಗ್ನಿಶಾಮಕ ದಳದಿಂದ ಬೆಂಕಿ ನಿಯಂತ್ರಣ; ದೊಡ್ಡ ಅನಾಹುತ ತಪ್ಪಿತು
Firefighters control the fire; a major disaster was averted
ಕೊಲ್ಹಾರ 23: ತಾಲೂಕಿನ ಮುಳವಾಡ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕರ್ನಾಟಕ ಗ್ರಾಮೀಣ ಬ್ಯಾಂಕಿಗೆ ಬೆಂಕಿ ತಗುಲಿದೆ ಎಂದು ಶಂಕೆ ವ್ಯಕ್ತವಾಗಿದ್ದು ಘಟನೆಯಲ್ಲಿ ಹಲವು ಪ್ರಮುಖ ದಾಖಲೆಗಳು, ಕಂಪ್ಯೂಟರ್‌ಗಳು ಸೇರಿದಂತೆ ಹಲವು ಪೀಠೋಪಕರಣಗಳು ಸುಟ್ಟು ಭಸ್ಮವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಆದಾಗ್ಯೂ ಬೆಂಕಿಯ ಕೆನ್ನಾಲಿಗೆಗೆ ಬ್ಯಾಂಕ್‌ನಲ್ಲಿದ್ದ ಪ್ರಮುಖ ಕಂಪ್ಯೂಟರ್‌ಗಳು, ಪೀಠೋಪಕರಣಗಳು ಹಾಗೂ ಇತರೆ ದಾಖಲೆ ವಸ್ತುಗಳು ಹಾನಿಗೊಳಗಾಗಿವೆ.ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ನಿಖರ ಕಾರಣ ಹಾಗೂ ಆಸ್ತಿ ನಷ್ಟದ ಪ್ರಮಾಣವನ್ನು ಸಂಬಂಧಪಟ್ಟ ಅಧಿಕಾರಿಗಳು ಪರೀಶೀಲಿಸುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 