ಅಮೆರಿಕದಲ್ಲಿ ಮತ್ತೆ ಗುಂಡಿನ ಮೊರೆತ: ನಾಲ್ವರಿಗೆ ಗಾಯ

ಹೂಸ್ಟನ್, ಡಿಸೆಂಬರ್ 18 (ಕ್ಸಿನ್ಹುವಾ) ಅಮೆರಿಕದ  ದಕ್ಷಿಣ ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಲ್ಲಿ ಬುಧವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.  ನಗರದ ದಕ್ಷಿಣ ಭಾಗದಲ್ಲಿರುವ ಮಾಲ್‌ನ ಹೊರಗೆ ಗುಂಡು ಹಾರಿಸಲಾಗಿದ್ದು  ಈ ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಒಟ್ಟು ನಾಲ್ವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ  ಎಂದು ಸ್ಯಾನ್ ಆಂಟೋನಿಯೊದ ಅಗ್ನಿಶಾಮಕ ಇಲಾಖೆ ತಿಳಿಸಿದೆ.  ಇದು ಉದ್ದೇಶಿತ ಶೂಟಿಂಗ್ ಆಗಿತ್ತೆ  ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಆದರೆ ದುರಂತದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.