ವಾ.ಕ.ರ.ಸಾ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

First Aid Training Camp for Technical Staff of V.K.R.S.A.

ವಾ.ಕ.ರ.ಸಾ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ 

ಕಾರವಾರ 20: ಹುಬ್ಬಳ್ಳಿಯಲ್ಲಿ ವಿಜಯನಗರ ಓದ್ಯೋಗಿಕ ಆರೋಗ್ಯ ಮತ್ತು ಕೈಗಾರಿಕಾ ಸುರಕ್ಷತಾ ಸಂಸ್ಥೆ, ಬೆಂಗಳೂರು ರವರ ಸಹಯೋಗದೊಂದಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಕಾರ್ಯಕ್ರಮವು ಗುರುವಾರ ನಡೆಯಿತು.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ, ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪ್ರಥಮ ಚಿಕಿತ್ಸೆ ಸಂಸ್ಥೆಯ ಸಿಬ್ಬಂದಿಗಳಿಗೆ ಅತ್ಯವಶ್ಯವಾಗಿದ್ದು, ಘಟಕದಲ್ಲಿ ಕರ್ತವ್ಯ ನಿರ್ವಹಿಸುವಾಗ ಯಾವುದೇ ಅವಘಡ ಉಂಟಾದಾಗ ಪ್ರಥಮ ಚಿಕಿತ್ಸೆ ನೀಡುವುದು ಅವಶ್ಯಕ, ಇಂತಹ ಸಂದರ್ಭದಲ್ಲಿ ನುರಿತ ಸಿಬ್ಬಂದಿಗಳಿಂದ ಪ್ರಥಮ ಚಿಕಿತ್ಸೆ ನೀಡುವಂತಾಗಲಿ ಎಂದು ಸಂಸ್ಥೆಯ ಎಲ್ಲ ಘಟಕಗಳ ತಾಂತ್ರಿಕ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.ವಿಜಯನಗರ ಓದ್ಯೋಗಿಕ ಆರೋಗ್ಯ ಮತ್ತು ಕೈಗಾರಿಕಾ ಸುರಕ್ಷತಾ ಸಂಸ್ಥೆಯ ಪ್ರವೀಣ ಮಾತನಾಡಿ ಪ್ರಥಮ ಚಿಕಿತ್ಸೆಯು ಕೆಲಸ ನಿರ್ವಹಿಸುವ ಸ್ಥಳದಲ್ಲಿ ಮಾತ್ರವಲ್ಲದೆ ಮನೆಗಳಲ್ಲಿ ಕೂಡ ಅವಶ್ಯಕವಾಗಿದೆ. ಪ್ರಥಮ ಚಿಕಿತ್ಸೆ ಕುಟುಂಬವನ್ನು ರಕ್ಷಣೆ ಮಾಡುತ್ತದೆ ಎಂದರು.ಶಿಬಿರದಲ್ಲಿ 9 ಘಟಕ ವಿಭಾಗೀಯ ಕಾರ್ಯಾಗಾರ ಹಾಗೂ ಪ್ರಾದೇಶಿಕ ಕಾರ್ಯಾಗಾರಗಳಿಂದ 55 ತಾಂತ್ರಿಕ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆಯ ತರಬೇತಿ ಪಡೆದುಕೊಂಡರು. ವಿರೂಪಾಕ್ಷ ಕಟ್ಟಿಮನಿ ನಿರೂಪಿಸಿದರು. ಸಾರ್ವಜನಿಕ ಸಂಪರ್ಕಾಧಿಕಾರಿ ನವೀನಕುಮಾರ ತಿಪ್ಪಾರವರು ವಂದಿಸಿದರು.