ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸೆ ಅಗತ್ಯ:ಎಂ ಎ ಶಕೀಬ್
First aid is necessary to save lives: M.A. Shakib
ಬಳ್ಳಾರಿ 16 :ಜೀವಗಳನ್ನು ಉಳಿಸಲು, ಅನಾರೋಗ್ಯವನ್ನು ತಡೆಗಟ್ಟಲು ಹಾಗೂ ವೃತ್ತಿಪರ ವೈದ್ಯಕೀಯ ಸಹಾಯ ಉತ್ತೇಜಿಸಲು ಪ್ರಥಮ ಚಿಕಿತ್ಸೆ ನಿರ್ಣಾಯಕವಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ನ ಜಿಲ್ಲಾ ಶಾಖೆಯ ಎಂ.ಎ ಶಕೀಬ್ ಅವರು ಹೇಳಿದರು.
ವಿದ್ಯಾರ್ಥಿ ಕಲ್ಯಾಣ ಘಟಕ ಹಾಗೂ ವಿವಿಯ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ “ಪ್ರಥಮ ಚಿಕಿತ್ಸಾ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಥಮ ಚಿಕಿತ್ಸೆಯು ಆರೋಗ್ಯ ಕಾಪಾಡುವಲ್ಲಿ ಬಹಳ ಪ್ರಮುಖವಾಗಿದೆ. ಆಕಸ್ಮಿಕವಾಗಿ ಕಾಯಿಲೆಗಳು ಅಥವಾ ಗಾಯಗಳಿಗೆ ತಕ್ಷಣದ ಸಹಾಯದ ಮಹತ್ವ ತಿಳಿಯಬೇಕು. ಇದರಿಂದ ತುರ್ತು ಪರಿಸ್ಥಿತಿಯನ್ನು ಹತೋಟಿಗೆ ತರಬಹುದು ಎಂದು ಹೇಳಿದರು.
ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಲಪತಿಗಳಾದ ಪ್ರೊ. ಎಂ ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ರಕ್ತ ನೀಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ನಿರ್ದಿಷ್ಟ ಪರಿಸ್ಥಿತಿಯನ್ನು ಆಧರಸಿ ಪ್ರಥಮ ಚಿಕಿತ್ಸೆಯನ್ನು ನೀಡಬೇಕು. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಲು ಪ್ರತಿಯೊಬ್ಬರು ಪ್ರಥಮ ಚಿಕಿತ್ಸೆಯ ಜ್ಞಾನ ಹೊಂದಿರಬೇಕು ಎಂದು ತಿಳಿಸಿದರು.ವಿವಿಯ ಕುಲಸಚಿವರಾದ ನಾಗರಾಜು.ಸಿ ಮಾತನಾಡಿ, ವಿದ್ಯಾರ್ಥಿಗಳು ಪ್ರಥಮ ಚಿಕಿತ್ಸೆಯ ವಿವಿಧ ಆಯಾಮಗಳನ್ನು ಕಲಿತುಕೊಂಡು ಬೇರೆಯವರಿಗೂ ಕಲಿಸುವ ಕಾರ್ಯವನ್ನು ಮಾಡಬೇಕಾಗಿದೆ. ಪ್ರಥಮ ಚಿಕಿತ್ಸೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.
ವಿದ್ಯಾರ್ಥಿ ಕಲ್ಯಾಣ ಘಟಕ ನಿರ್ದೇಶಕ ಡಾ.ಶಶಿಕಾಂತ ಎಚ್ ಮಜಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು ಸೇರಿದಂತೆ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 