ಪ್ರಥಮ ಚಿಕಿತ್ಸಾ ಜ್ಞಾನದಿಂದ ಜೀವ ರಕ್ಷಣೆ ಸಾಧ್ಯ
First aid knowledge can save lives
ವಿಜಯಪುರ 30: ಇಂದಿನ ವೇಗದ ಜೀವನದಲ್ಲಿ ಸಂಭವಿಸುವ ಅಪಘಾತಗಳು ಹಾಗೂ ಅನಾಹುತ ಸಂದರ್ಭಗಳಲ್ಲಿ ಜೀವ ರಕ್ಷಣೆಗಾಗಿ ಪ್ರಥಮ ಚಿಕಿತ್ಸೆ ಕುರಿತು ಜ್ಞಾನ ಅವಶ್ಯಕವಾಗಿದೆ ಎಂದು ಮಹಿಳಾ ವಿವಿಯ ದೈಹಿಕ ಶಿಕ್ಷಣ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ ರಾಜಕುಮಾರ ಪಿ. ಮಾಲಿಪಾಟೀಲ್ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಮತ್ತು ವಿಜಯಪುರದ ಅಲರ್ಟ ಎನ್.ಜಿ.ಓ. ಚೆನೈಬೇಸ್ ಇವರ ಸಹಯೋಗದೊಂದಿಗೆ ಇತ್ತೀಚಿಗೆ ಹಮ್ಮಿಕೊಂಡಿದ್ದ ಉಪಕರಣಗಳೊಂದಿಗೆ ಪ್ರಥಮ ಚಿಕಿತ್ಸೆ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಥಮ ಚಿಕಿತ್ಸೆ ಇಂದಿನ ಸಮಾಜದಲ್ಲಿ ಅತ್ಯಂತ ಅಗತ್ಯವಾದ ಕೌಶಲ್ಯವಾಗಿದ್ದು, ಇಂತಹ ತರಬೇತಿಗಳ ಮೂಲಕ ವಿದ್ಯಾರ್ಥಿನಿಯರು ಸಮಾಜದಲ್ಲಿ ನಡೆಯುವ ಅಪಘಾತ, ಅವಘಡಗಳ ಸಂದರ್ಭಗಳಲ್ಲಿ ಜೀವ ಉಳಿಸುವ ಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಪ್ರಾಯೋಗಿಕ ಜ್ಞಾನದಿಂದ ಮಾತ್ರ ನಿಜವಾದ ಸಮಾಜಸೇವೆ ಸಾಧ್ಯವಾಗುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮೊಹಮ್ಮದ್ ಗೌಸರ ಮಾತನಾಡಿ, ಪ್ರಥಮ ಚಿಕಿತ್ಸೆ ಹೇಗೆ ಪ್ರಾರಂಭವಾಯಿತು ಮತ್ತು ಅದನ್ನು ಕಲಿಯುವುದರಿಂದ ದೊರೆಯುವ ಉಪಯೋಗಗಳ ಕುರಿತು ಉಪಕರಣಗಳ ಸಹಾಯದಿಂದ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಭಾಗದ ಮುಖ್ಯಸ್ಥ ಪ್ರೊ. ಹನುಮಂತಯ್ಯ ಪೂಜಾರಿ ಮಾತನಾಡಿ, ಪ್ರಥಮ ಚಿಕಿತ್ಸೆ ಎಂಬುದು ದೈಹಿಕ ಶಿಕ್ಷಣ ಶಿಕ್ಷಕರಿಗೆ ಅತ್ಯಂತ ಅವಶ್ಯಕವಾದ ಜ್ಞಾನವಾಗಿದ್ದು, ಕ್ರೀಡೆಗಳ ಸಮಯದಲ್ಲಿ ಕ್ರೀಡಾಪಟುಗಳಿಗೆ ಅಪಘಾತಗಳು ಸಂಭವಿಸಿದಾಗ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಹೆಚ್ಚಿನ ಗಾಯ ಅಥವಾ ನೋವು ತಪ್ಪಿಸಲು ಸಹಾಯಕವಾಗುವ ಉತ್ತಮ ವಿದ್ಯೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರೊ,ಸಕ್ಪಾಲ್ ಹೂವಣ್ಣ, ಪ್ರೊ, ಶ್ರೀನಿವಾಸ ಹಾಗೂ ಡಾ.ಕಿರಣ್ ಜಿ,ಎನ್, ವಿವಿಧ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು
ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಜ್ಯೋತಿ ಉಪಾಧ್ಯೆ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅಶ್ವಿನಿ ನಿರೂಪಿಸಿದರು. ಶಿಭಾ ರೊಳ್ಳಿ ಅತಿಥಿಗಳನ್ನು ಪರಿಚಯಿಸಿದರು. ನಂದಿನಿ ಪಾಟೀಲ್ ವಂದಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 