ಜಿಲ್ಲೆಯಲ್ಲಿ ಏ.1 ರಿಂದ ಮೊದಲ ಹಂತದ ಜನಗಣತಿ : ಮಾಹಿತಿ ಗೌಪ್ಯವಾಗಿರುತ್ತದೆ- ನಿಖರ ಮಾಹಿತಿ ನೀಡಿ-ವದಂತಿಗಳಿಗೆ ಕಿವಿಗೊಡಬೇಡಿ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
First phase of census to be conducted in the district from April 1: Information will be confidential
ಲೋಕದರ್ಶನ ವರದಿ
ಹಾವೇರಿ 32 : ಜಿಲ್ಲೆಯಲ್ಲಿ ಮೊದಲ ಹಂತದ ಜನಗಣತಿ ಏಪ್ರಿಲ್ 1 ರಿಂದ ಮೇ 15ರವರೆಗೆ ಜರುಗಲಿದೆ. ಸಾರ್ವಜನಿಕರು ನೀಡಿದ ಮಾಹಿತಿ ಗೌಪ್ಯವಾಗಿರುತ್ತದೆ ಹಾಗೂ ಯಾವುದೇ ಸೌಲಭ್ಯಗಳು ಕಡಿತವಾಗುವುದಿಲ್ಲ. ಹಾಗಾಗಿ ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ನಿಖರ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರಧಾನ ಜನಘನತಿ ಅಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ವಿವಿಧ ಯೋಜನೆಗಳ ಜಾರಿಗೆ ಜನಸಂಖ್ಯೆ ಹಾಗೂ ಜನರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಬಹಳ ಮುಖ್ಯವಾಗಿದೆ. ದೇಶದ ಅಭಿವೃದ್ಧಿ ಹಿತದೃಷ್ಟಿಯಿಂದ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಜನಗಣತಿಯಲ್ಲಿ ಭಾಗವಹಿಸಬೇಕು ಎಂದರು. ಜನಗಣತಿ ಎಂದರೆ ಒಂದು ನಿರ್ಧಿಷ್ಟ ಸಮಯದಲ್ಲಿ ಒಂದು ದೇಶದಲ್ಲಿನ ಪ್ರತಿಯೊಂದು ಕುಟುಂಬ, ಪ್ರತಿಯೊಬ್ಬ ವ್ಯಕ್ತಿ ಮತ್ತು ಅವರ ಜನಸಂಖ್ಯಾ, ಆರ್ಥಿಕ ಮತ್ತು ಸಾಮಾಜಿಕ ಮಾಹಿತಿಗಳ ಅಧಿಕೃತ ಸಂಫೂರ್ಣಎಣಿಕೆಯಾಗಿದೆ ಎಂದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 