76ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಉತ್ತರ ಪ್ರದೇಶದ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ
First prize for a still film on the Mahakumbha Mela of Uttar Pradesh at the 76th Republic Day Parade
ನವದೆಹಲಿ 29: 76ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಉತ್ತರ ಪ್ರದೇಶದ ಮಹಾಕುಂಭ ಮೇಳ ಕುರಿತ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ.
ಆತ್ಮನಿರ್ಭರ ಭಾರತದ ಅಡಿಯಲ್ಲಿ ಪರಿಸರ ಸ್ನೇಹಿ ವಸ್ತುಗಳನ್ನು ಸಿದ್ಧಪಡಿಸಿ ಬಳಕೆ ಮಾಡುವ ಮೂಲಕ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಯ ಉದ್ದೇಶದ ತ್ರಿಪುರಾ ಸ್ತಬ್ಧಚಿತ್ರಕ್ಕೆ 2ನೇ ಬಹುಮಾನ ಲಭಿಸಿದೆ. ಆಂಧ್ರಪ್ರದೇಶದ ಪರಿಸರ ಸ್ನೇಹಿ ಮರದ ಆಟಿಕೆಗಳ ಸ್ತಬ್ಧಚಿತ್ರಕ್ಕೆ ಮೂರನೇ ಬಹುಮಾನ ಸಂದಿದೆ.
ಕೇಂದ್ರ ಸಚಿವಾಲಯ ಹಾಗೂ ಇಲಾಖೆಗಳ ವಿಭಾಗದಲ್ಲಿ ಆದಿವಾಸಿ ಕಲ್ಯಾಣ ಸಚಿವಾಲಯದ ಸ್ತಬ್ಧಚಿತ್ರ ಪ್ರಥಮ ಬಹುಮಾನ ಪಡೆದಿದೆ. ಹಾಗೆಯೇ ಪಥ ಸಂಚಲನದಲ್ಲಿ ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆ ಹಾಗೂ ದೆಹಲಿ ಪೊಲೀಸ್ ತಂಡವು ಬಹುಮಾನ ಪಡೆದಿವೆ.
ಮೂರು ರಕ್ಷಣಾ ದಳಗಳಲ್ಲಿ ಜಮ್ಮು ಮತ್ತು ಕಾಶ್ಮೀರ ರೈಫಲ್ಸ್ ಅತ್ಯುತ್ತಮ ಪಥಸಂಚಲನ ನಡೆಸಿದ ತಂಡ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶ, ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಸ್ತಬ್ಧಚಿತ್ರಗಳು 76ನೇ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಪಾಲ್ಗೊಂಡಿದ್ದವು. ಇವುಗಳಲ್ಲಿ ಅತ್ಯುತ್ತಮವಾದದ್ದನ್ನು ಆಯ್ಕೆ ಮಾಡಲು ಮೂವರು ತೀರ್ಪುಗಾರರನ್ನೊಳಗೊಂಡ ತಂಡವನ್ನು ರಕ್ಷಣಾ ಸಚಿವಾಲಯ ರಚಿಸಿತ್ತು. ಇದರೊಂದಿಗೆ ಆನ್‌ಲೈನ್ ಮೂಲಕ ಮತ ಹಾಕಲು ಸಾರ್ವಜನಿಕರಿಗೆ 2 ದಿನಗಳ ಅವಕಾಶ ನೀಡಲಾಗಿತ್ತು.
ಸಾರ್ವಜನಿಕರ ಮೆಚ್ಚಿನ ಸ್ತಬ್ಧಚಿತ್ರ ವಿಭಾಗದಲ್ಲಿ ಗುಜರಾತ್ ಮೊದಲ ಬಹುಮಾನ ಪಡೆದಿದೆ. 2ನೇ ಹಾಗೂ ಮೂರನೇ ಬಹುಮಾನವು ಕ್ರಮವಾಗಿ ಉತ್ತರ ಪ್ರದೇಶ ಹಾಗೂ ಉತ್ತರಾಖಂಡಕ್ಕೆ ಲಭಿಸಿದೆ. ಸಿಆರ್‌ಪಿಎಫ್‌ಗೆ ಅತ್ಯುತ್ತಮ ಪಥ ಸಂಚಲನ ತಂಡ ಹಾಗೂ ಸಚಿವಾಲಯದ ಸ್ತಬ್ಧಚಿತ್ರಗಳಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಬಹುಮಾನ ಪಡೆದಿವೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 