ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮ
Fish Farmers Day Celebration Program
ಕೊಪ್ಪಳ 11 : ಕೊಪ್ಪಳ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮೀನುಗಾರಿಕೆ ಇಲಾಖೆಯ ವತಿಯಿಂದ ಗುರುವಾರದಂದು ಜಿಲ್ಲಾ ಕೃಷಿ ವಿಸ್ತರಣಾ ಕೇಂದ್ರದ ಸಭಾಂಗಣದಲ್ಲಿ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮೀನು ಕೃಷಿಕರಿಗೆ ಈ ದಿನಾಚರಣೆಯ ಮಹತ್ವ ಮತ್ತು ಮೀನುಗಾರಿಕೆ ಬಗ್ಗೆ ಮಾಹಿತಿ ನೀಡಿ, 2024-25 ನೇ ಸಾಲಿನ ಅಠಜಿಜಜ ಖಿಚಿಛಟಜ ಃಠರಞ ಎಂಬ ಇಲಾಖೆಯ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕರಾದ ಡಾ.ಮಲ್ಲಯ್ಯ, ಕೊಪ್ಪಳ ಕೃಷಿ ವಿಸ್ತರಣಾ ಕೇಂದ್ರದ ಮುಂದಾಳು ಡಾ. ರವಿ, ಜಿಲ್ಲಾ ಪಂಚಾಯತ್ ಓಂಬುಡ್ಸ್‌ಮನ್ ವೀರಣ್ಣ ಕಮತರ್, ಜಿಲ್ಲಾ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಕೊಪ್ಪಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕ ಬಸವರಾಜ್ ಪಾಟೀಲ್, ಗಂಗಾವತಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕ ಆನಂದ್ ಪಾಟೀಲ್ ಹಾಗೂ ಮೀನುಗಾರಿಕೆ ಇಲಾಖೆಯ ಸಿಬ್ಬಂದಿ ವರ್ಗದವರು ಸೇರಿದಂತೆ ಜಿಲ್ಲೆಯ ವಿವಿಧ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಮೀನುಗಾರರ ಸಹಕಾರ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 