ಸಿಡಿಲು ಬಡಿದು ಕಡಲತೀರದಲ್ಲಿದ್ದ ಮೀನುಗಾರ ಸಾವು
Fisherman dies after being struck by lightning on beach
ಕಾರವಾರ 17 : ಹೊನ್ನಾವರದ ಅಪ್ಸರಕೊಂಡ ಕಡಲತೀರದಲ್ಲಿ ಸಿಡಿಲು ಬಡಿದು ಕಡಲತೀರದಲ್ಲಿದ್ದ ಮೀನುಗಾರ ಸಾವನ್ನಪ್ಪಿದ ಘಟನೆ ನಡೆದಿದೆ. ಹೊನ್ನಾವರ ವಿನಾಯಕ ಖಾರ್ವಿ ಮೃತಪಟ್ಟ ಮೀನುಗಾರ. ಇವರು ಪಾತಿ ದೋಣಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.
ಹೊನ್ನಾವರದಲ್ಲಿ ನಿನ್ನೆ ಗುಡುಗು ಸಿಡಿಲು ಸಹಿತ ಮಳೆ ಸುರಿದಿತ್ತು. ಹೊನ್ನಾವರದಲ್ಲಿ ಇನ್ನೊಂದು ಪ್ರಕರಣದಲ್ಲಿ ಸಿಡಿಲು ಬಡಿದು ಪ್ರವಾಸಿಗರಿಗೆ ಗಾಯವಾದ ಘಟನೆ ಸಹ ನಡೆದಿದೆ. ಮಳೆ ಬರುವ ಸಮಯದಲ್ಲಿ ಪ್ರವಾಸಿಗರು ಕಡಲತೀರಕ್ಕೆ ಬಂದಿದ್ದರು. ಹೊನ್ನಾವರದ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಸಿಡಿಲು ಬಡಿದು ಗಾಯಗೊಂಡ ಪ ದರ ಪ್ರವಾಸಿರಿಗೆ ಚಿಕಿತ್ಸೆ ನೀಡಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿವೆ.
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ 