ಮೀನುಗಾರಿಕಾ ಬೋಟ್ ಮುಳುಗಡೆ: 24 ಮೀನುಗಾರರ ರಕ್ಷಣೆ
Fishing Boat Sinking: Rescue of 24 Fishermen
ಕಾರವಾರ, ಆ.31: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾಗುತ್ತಿದ್ದ ವೇಳೆ ಅದರಲ್ಲಿದ್ದ 24 ಮೀನುಗಾರರನ್ನು ಇತರ ಬೋಟ್ಗಳ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬೆಳಂಬಾರ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಡೆಯಾಗುತ್ತಿತ್ತು. ಈ ಘಟನೆ ಭಾನುವಾರ ಮುಂಜಾನೆ ಅಂಜದೀವ್ ದ್ವೀಪದ ಸಮೀಪ ನಡೆದಿದೆ.
ವಿಷಯ ತಿಳಿದ ತಕ್ಷಣ ಸಮೀಪದಲ್ಲಿದ್ದ ಐದು ಮೀನುಗಾರಿಕಾ ಬೋಟ್ಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಮುಳುಗುತ್ತಿದ್ದ ಬೋಟ್ನಲ್ಲಿದ್ದ ಎಲ್ಲ 24 ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಮುಳುಗುತ್ತಿದ್ದ ಬೋಟ್ನ್ನು ಉಳಿಸಿಕೊಳ್ಳಲು ಇತರ ಬೋಟ್ಗಳಿಗೆ ಹಗ್ಗ ಕಟ್ಟಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಘಟನೆಯಿಂದ ಬೋಟ್ ಹಾಗೂ ಮೀನುಗಾರಿಕಾ ಪರಿಕರಗಳಿಗೆ ಉಂಟಾದ ನಷ್ಟದ ಅಂದಾಜು ಮಾಡಬೇಕಿದೆ. ಬೋಟ್ ಮುಳುಗಡೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 